ಬೀದರ್: ಹಿಟ್ ಆ್ಯಂಡ್ ರನ್ ದುರಂತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೀದರ್ (Bidar) ಜಿಲ್ಲೆಯ ಭಾಲ್ಕಿ (Bhalki) ತಾಲ್ಲೂಕಿನ ಪಾಂಡ್ರಿ ಗ್ರಾಮದ ಬಳಿ ನಡೆದಿದೆ.
ಮೃತರನ್ನು ಮೂಲತಃ ಮಹಾರಾಷ್ಟ್ರದ ನಾಂದೇಡ್ ಗ್ರಾಮದ ನಾಗೂರಾವ್ (40) ಹಾಗೂ ಭಾನುದಾಸ್ (42) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಬಿಜೆಪಿ ಹೈಕಮಾಂಡ್ ಸ್ಟ್ರಾಂಗ್ ಇದೆ, ಆದಷ್ಟು ಬೇಗ ಬಿಜೆಪಿ ಕಿತ್ತಾಟಕ್ಕೆ ಅಂತ್ಯ: ಮುರುಗೇಶ್ ನಿರಾಣಿ
ಮೂವರು ಸೇರಿ ಒಂದು ಬೈಕ್‌ನಲ್ಲಿ ಔರಾದ್‌ನಿಂದ ನಾಂದೇಡ್‌ಗೆ ಹೋಗುತ್ತಿದ್ದರು. ಪಾಂಡ್ರಿ ಬಸ್ ನಿಲ್ದಾಣದ ಬಳಿ ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದು ಹೋಗಿದೆ. ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಸದ್ಯ ಈ ಕುರಿತು ಮೆಹಕರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಕಾಮುಕನಿಗೆ 21 ವರ್ಷ ಜೈಲು