ಚಿಕ್ಕಬಳ್ಳಾಪುರ: ಬೈಕ್‌ಗೆ (Bike) ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಹೊನ್ನೇನಹಳ್ಳಿ (Honnenahalli) ಗೇಟ್ ಬಳಿ ಸಂಭವಿಸಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಬಾದಗಾನಹಳ್ಳಿ ಗ್ರಾಮದ ವರುಣ್ (22) ಹಾಗೂ ಮೂಲತಃ ಕುಣಿಗಲ್‌ನ ಜೀವನ್ (22) ಮೃತ ಯುವಕರು. ಚಿಕ್ಕಬಳ್ಳಾಪುರ ತಾಲೂಕಿನ ಸೇಟ್ ದಿನ್ನೆ ಬಳಿ ಇರುವಂತಹ ಲಾಜಿಸ್ಟಿಕ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಯುವಕರು ತಡರಾತ್ರಿ ಕೆಲಸ ಮುಗಿಸಿ ಮನೆಗೆ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಪಿಎಂ ಕಿಸಾನ್ ಸಮ್ಮಾನ್ ನಿಧಿಯ 23ನೇ ಕಂತು ಇಂದು ಬಿಡುಗಡೆ – ಅರ್ಹ ರೈತರ ಖಾತೆಗೆ 18,880 ಕೋಟಿ ಹಣ ಜಮೆ
ಘಟನೆ ಸಂಬಂಧ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರೈಲಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದ್ರೆ ಬೀಳುತ್ತೆ ಭಾರೀ ದಂಡ – ಜು.1 ರಿಂದ ಹೊಸ ನಿಯಮ
