ಬೆಂಗಳೂರು: ಇಂದು ಸಿಹಿಕಹಿ ಚಂದ್ರು ಮಗಳು ಹಿತಾ ಚಂದ್ರಶೇಖರ್ ತಮ್ಮ ಗೆಳೆಯ ನಟ ಕಿರಣ್ ಶ್ರೀನಿವಾಸ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ,
ನಟ ಕಿರಣ್ ಶ್ರೀನಿವಾಸ್ ಗುರು-ಹಿರಿಯರು ನಿಶ್ಚಯ ಮಾಡಿದ್ದ ಶುಭ ಮುಹೂರ್ತದಲ್ಲಿ ಹಿತಾ ಚಂದ್ರಶೇಖರ್ಗೆ ಮಾಂಗಲ್ಯಧಾರಣೆ ಮಾಡಿದ್ದಾರೆ. ಈ ಜೋಡಿಯ ಮದುವೆ ಸಾಂಪ್ರದಾಯಿಕವಾಗಿ ಅದ್ಧೂರಿಯಾಗಿ ನಡೆದಿದೆ. ಅನುಪಮಾ ಗೌಡ, ಕೃಷಿ ತಾಪಂಡ ಸೇರಿದಂತೆ ಕಿರುತೆರೆ ಮತ್ತು ಬೆಳ್ಳಿತೆರೆ ಕಲಾವಿದರು ಮದುವೆಗೆ ಬಂದು ನವ ಜೋಡಿಗೆ ಶುಭಾಶಯವನ್ನು ಕೋರಿದ್ದಾರೆ.
Advertisement
Advertisement
ಕಿರಣ್ ಮತ್ತು ಹಿತಾ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಈ ಬಗ್ಗೆ ನಟಿ ಸೋನು ಗೌಡ ಸೋಶಿಯಲ್ ಮೀಡಿಯಾದಲ್ಲಿ ಬಹಿರಂಗಪಡಿಸಿದ್ದರು. ನಂತರ ಮೇ ತಿಂಗಳಲ್ಲಿ ಕಿರಣ್ ಹಾಗೂ ಹಿತಾ ಚಂದ್ರಶೇಖರ್ ಅವರು ಕುಟುಂಬದವರ ಸಮ್ಮುಖದಲ್ಲಿ ಪರಸ್ಪರ ರಿಂಗ್ ಬದಲಾಯಿಸುವ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದರು.
Advertisement
ಕಿರಣ್ 2008ರಲ್ಲಿ ‘ಹಾಗೇ ಸುಮ್ಮನೆ’ ಸಿನಿಮಾದ ಮೂಲಕ ಸ್ಯಾಂಡಲ್ವುಡ್ ಪ್ರವೇಶಿಸಿದ್ದು, ‘ಚಿರು’, ‘ಮುಗಿಲ ಮಲ್ಲಿಗೆಯೋ’, ‘ಕಾಂಚನಾ’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಕಿರಣ್ ಸಿನಿಮಾ ಮಾತ್ರವಲ್ಲದೇ ರಿಯಾಲಿಟಿ ಶೋ ಹಾಗೂ ಧಾರಾವಾಹಿಗಳಲ್ಲೂ ಕಾಣಿಸಿಕೊಂಡಿದ್ದಾರೆ.
Advertisement
ಇನ್ನೂ ಹಿತಾ ಚಂದ್ರಶೇಖರ್ 2016ರಲ್ಲಿ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಡಾನ್ಸಿಂಗ್ ಸ್ಟಾರ್’ ಸೀಸನ್ 3ರಲ್ಲಿ ವಿಜೇತೆಯಾಗಿದ್ದರು. ನಂತರ ‘ಕಾಲ್ ಕೆಜಿ ಪ್ರೀತಿ’ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದ್ದರು. ಜಗ್ಗೇಶ್ ಅಭಿನಯದ ‘ಪ್ರೀಮಿಯರ್ ಪದ್ಮಿನಿ’ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.