ಜಮ್ಮು- ಕಾಶ್ಮೀರದಲ್ಲಿ ಎನ್‍ಕೌಂಟರ್ – ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಓರ್ವ ಹತ್ಯೆ

Public TV
1 Min Read
army 1 1

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನಾಪಡೆ ಎನ್‍ಕೌಂಟರ್ ನಡೆಸಿ ಹಿಜ್ಬ್-ಉಲ್-ಮುಜಾಹಿದ್ದೀನ್ (ಎಚ್‍ಎಂ) ಉಗ್ರ ಸಂಘಟನೆಗೆ ಸೇರಿದ ಓರ್ವ ಭಯೋತ್ಪಾದಕನನ್ನು ಹತ್ಯೆಗೈದಿದೆ ಎಂದು ಕಾಶ್ಮೀರ ವಲಯ ಪೊಲೀಸರು ಶನಿವಾರ ತಿಳಿಸಿದ್ದಾರೆ.

ಕುಲ್ಗಾಂನ ಖಾಂಡಿಪೋರಾದಲ್ಲಿ ಉಗ್ರರು ಅಡಗಿ ಕುಳಿತಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆ ಇಂದು ಮುಂಜಾನೆ ಭಾರತೀಯ ಸೇನಾಪಡೆ ಕಾರ್ಯಾಚರಣೆ ನಡೆಸಲು ಆರಂಭಿಸಿದರು.

ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಹಾಗೂ ಸೈನಿಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಉಗ್ರನ್ನನು ಸೇನಾಪಡೆ ಎನ್ಕೌಂಟರ್ ಮಾಡಿರುವುದಾಗಿ ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮೂಲಕ ತಿಳಿಸಿದ್ದಾರೆ. ಸದ್ಯ ಈ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

Share This Article