ಹುಬ್ಬಳ್ಳಿ: ಮಹಾದಾಯಿ (Mahadayi) ವಿಚಾರದಲ್ಲಿ ಬಿಜೆಪಿ (BJP) ಸುಳ್ಳು ಹೇಳುತ್ತಲೇ ಬಂದಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ದಿನಾಂಕವಿಲ್ಲದ, ಸಂಖ್ಯೆ ಇಲ್ಲದ ಕಡತ ಟ್ವೀಟ್ ಮಾಡಿದ್ದರು. ನೀವು ಜನರನ್ನು ಒಮ್ಮೆ ಮೂರ್ಖರನ್ನಾಗಿ ಮಾಡಬಹುದು ಯಾವಾಗಲೂ ಮೂರ್ಖರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಎಚ್.ಕೆ.ಪಾಟೀಲ್ (H K Patil) ವಾಗ್ದಾಳಿ ನಡೆಸಿದ್ದಾರೆ.
Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಬಿಜೆಪಿ ಅಧ್ಯಕ್ಷ, ಕೇಂದ್ರ ಸಚಿವರು ಸುಳ್ಳು ಹೇಳಿದ್ದಾರೆ. ಬಿಜೆಪಿಯ ಸುಳ್ಳುಗಳನ್ನು ಕಾಂಗ್ರೆಸ್ (Congress) ಬಹಿರಂಗಪಡಿಸುತ್ತಲೇ ಬಂದಿದೆ. ಅರ್ಜಿ ಕೊಟ್ಟ ಕೂಡಲೇ ಅನುಮತಿ ಸಿಗುತ್ತದೆ ಎಂದು ಪ್ರಹ್ಲಾದ್ ಜೋಶಿ (Pralhad Joshi), ಸಿಎಂ ಬೊಮ್ಮಾಯಿ (Basavaraj Bommai) ಹೇಳಿದ್ದರು. ಹದಿನೈದು ದಿನದೊಳಗೆ ಕಾಮಗಾರಿ ಆರಂಭಿಸುವುದಾಗಿ ಪ್ರಚಾರ ಮಾಡಿದ್ದರು. ಪ್ರಹ್ಲಾದ್ ಜೋಶಿಯವರು ನನಗೆ ಮತ್ತು ಸಿದ್ದರಾಮಯ್ಯ (Siddaramaiah) ನವರಿಗೆ ಕಣ್ಣು ಕಾಣಿಸುವುದಿಲ್ಲ ಎಂದು ಹೇಳಿದ್ದರು. ನಮ್ಮ ರಾಜಕೀಯ ಸಂಸ್ಕೃತಿಗೆ ಅಪಹಾಸ್ಯ ಮಾಡಿ ಅವಮಾನ ಮಾಡಿದರು ಎಂದರು.
Advertisement
Advertisement
ಕಳಸಾ- ಬಂಡೂರಿ ಯೋಜನೆ (Kalasa-Banduri Nala project) ಜಾರಿಗೆ ಅರಣ್ಯ ಇಲಾಖೆಯಿಂದ ಪರವಾನಗಿ ಪಡೆದುಕೊಳ್ಳಬೇಕಾಗಿದೆ. ಕ್ಲಿಯರೆನ್ಸ್ ಇಲ್ಲದೆ ಕಾಮಗಾರಿ ಪ್ರಾರಂಭಿಸದಂತೆ ಕೋರ್ಟ್ ಆದೇಶ ನೀಡಿದೆ. ಕ್ರಮ ಕೈಗೊಳ್ಳಬೇಕಾದ ರಾಜ್ಯ ಸರ್ಕಾರ ಇದುವರೆಗೆ ಮಲಗಿದೆ. ಎಲ್ಲಿದೆ ನಿಮ್ಮ ಪೌರುಷ. ನಿಮ್ಮ ಹಸಿಸುಳ್ಳು ಬಹಿರಂಗಗೊಂಡಿದೆ ಎಂದು ಹೇಳಿದರು.
Advertisement
ಮಹಾದಾಯಿ ಆಗಿಯೇ ಬಿಟ್ಟಿತು ಎಂದು ವಿಜಯೋತ್ಸವ ಆಚರಿಸಿದ್ದರು. ಪಟಾಕಿ ಹಚ್ಚಿ ಸಂಭ್ರಮಿಸಿದರು. ಈಗ ಎಲ್ಲಿ ಹೋಯಿತು ನಿಮ್ಮ ಪೌರುಷ? ಸುಳ್ಳಿನ ಮೇಲೆ ಬಿಜೆಪಿ ಸವಾರಿ ಮಾಡುತ್ತಿದೆ ಎಂದರು. ಇದನ್ನೂ ಓದಿ: ಟ್ರಾಫಿಕ್ ದಂಡ 50% ರಿಯಾಯ್ತಿ 5 ತಿಂಗಳು ಅವಧಿ ವಿಸ್ತರಣೆ ಮಾಡಿ – ಜೆಡಿಎಸ್ ಸದಸ್ಯ ಮಂಜೇಗೌಡ ಒತ್ತಾಯ
ಕೇಂದ್ರ ಗೃಹ ಸಚಿವ ಅಮಿತ್ ಶಾ (AmitShah), ಮಹಾದಾಯಿ ನಮ್ಮ ಬಿಜೆಪಿಯ ಕೊಡುಗೆ ಎಂದು ಹೇಳುತ್ತಾರೆ. ಈಗ ಅಮಿತ್ ಶಾ ಎಲ್ಲಿದ್ದಾರೆ? ನಿಮಗೆ ಮಹಾದಾಯಿ ಹೆಸರಲ್ಲಿ ಮತ ಕೇಳುವ ನೈತಿಕತೆಯಿಲ್ಲ. ಸುಪ್ರೀಂ (Supreme Court) ತೀರ್ಪು ಬಂದು ನೂರು ತಾಸುಗಳಾಯಿತು. ಆದರೆ ರಾಜ್ಯಸರ್ಕಾರ ಮಾತ್ರ ನಿದ್ರೆ ಮಾಡುತ್ತಿದೆ. ಎಲ್ಲಾ ಅನುಮತಿ ಪಡೆದಿರುವುದಾಗಿ ಹೇಳಿದ್ದರು. ಆದರೆ ಈಗ ಗೋವಾ ವೈಲ್ಡ್ ಲೈಫ್ ಅನುಮತಿ ಬೇಕು ಎಂದು ಕೋರ್ಟ್ ಹೇಳಿದೆ. ಬಿಜೆಪಿಯ ಹಸಿಸುಳ್ಳು ಬಹಿರಂಗಗೊಂಡಿದೆ ಎಂದು ಹೇಳಿಕೆಯನ್ನು ಕೊಟ್ಟಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k