ಅಧಿವೇಶನ ಮುಗಿಯೋದ್ರೊಳಗೆ ಕಂಬಳಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆ – ಹೆಚ್‌.ಕೆ ಪಾಟೀಲ್‌

Public TV
2 Min Read
HK Patil Kambala

ಬೆಂಗಳೂರು: 2024-25ನೇ ಸಾಲಿನಲ್ಲಿ ರಾಜ್ಯದ 5 ಕಡೆ ನಡೆಯಲಿರುವ ಕಂಬಳಕ್ಕೆ (Kambala) ಈ ಅಧಿವೇಶನ ಮುಗಿಯುವುದರ ಒಳಗೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡುತ್ತೇವೆ ಎಂದು ಸಚಿವ ಹೆಚ್‌.ಕೆ ಪಾಟೀಲ್‌ (HK Patil) ಪ್ರಕಟಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪ್ರತಾಪ್ ಸಿಂಹ ನಾಯಕ್ (Prathap Simha Nayak) ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ – ಅಶ್ವಥ್ ನಾರಾಯಣ್‌ ನಡುವೆ ಏಕವಚನ, ಮಾತಿನ ಚಕಮಕಿ; ಸದನದಲ್ಲಿ ಕೋಲಾಹಲ!

HK Patil Kambala 2

2023-24 ಆರ್ಥಿಕ ವರ್ಷದಲ್ಲಿ ಜಾನಪದ ಕ್ರೀಡೆ ಕಂಬಳ ಸಂಘಟಕರಿಗೆ ಅನುದಾನ ಬಿಡುಗಡೆ ಮಾಡಿಲ್ಲ. ಇದರಿಂದ ಸಂಘಕರಿಗೆ ಸಮಸ್ಯೆ ಆಗಿದೆ. ರಾಜ್ಯದ 20 ಕಡೆ ಕಂಬಳ ನಡೆದಿದೆ. ಸದಾನಂದಗೌಡರು ಸಿಎಂ ಆಗಿದ್ದಾಗ 1 ಕೋಟಿ ರೂ. ಬಿಡುಗಡೆ ಮಾಡಿದ್ದರು. ಈ ಸರ್ಕಾರ ಯಾಕೆ ಅನುದಾನ ಬಿಡುಗಡೆ ಮಾಡಿಲ್ಲ? ಲಕ್ಷಾಂತರ ಜನ ಈ ಕಂಬಳವನ್ನೇ ನೆಚ್ಚಿಕೊಂಡಿದ್ದಾರೆ. ಬಜೆಟ್‌ನಲ್ಲಿ ಇದಕ್ಕೆ ಹಣ ಮೀಸಲು ಇಡಬೇಕಿತ್ತು. ಕಳೆದ ವರ್ಷದ ಕಂಬಳದ ಅನುದಾನನ್ನೂ ಬಿಡುಗಡೆ ಮಾಡಿಲ್ಲ, ಏಕೆ ಎಂದು ಪ್ರತಾಪ್ ಸಿಂಹ ನಾಯಕ್ ಪ್ರಶ್ನೆ ಮಾಡಿದರು. ಇದನ್ನೂ ಓದಿ: ನ್ಯಾಯಾಂಗದ ಬಗ್ಗೆ ಗೌರವವಿದೆ, ಅಪರಾಧ ಸಾಬೀತಾದ್ರೆ ಯಾರೇ ಆಗಿದ್ರೂ ಶಿಕ್ಷೆ ಆಗಲಿ: ಅನು ಪ್ರಭಾಕರ್

ಇದಕ್ಕೆ ಉತ್ತರಿಸಿದ ಸಚಿವ ಹೆಚ್‌.ಕೆ ಪಾಟೀಲ್‌, ಕಳೆದ ವರ್ಷದ ಕಂಬಳದ ಅನುದಾನ ಬಿಡುಗಡೆ ಆಗಿಲ್ಲ. 2 ಕಂಬಳಕ್ಕೆ 5 ಮತ್ತು 10 ಲಕ್ಷ ರೂ. ಅನುದಾನ ನೀಡಿದ್ದೇವೆ. ಡಿಸಿ ಅವರು ಬಿಲ್ ತಯಾರಿಸಿ ಮಾರ್ಚ್ 20ರ ಒಳಗೆ ಕಳಿಸಿದ್ದಾರೆ. ಬಿಲ್ ಕಳಿಸೋದು ತಡವಾಗಿ ಅನುದಾನ ಬಿಡುಗಡೆ ಆಗಿಲ್ಲ. ಕೂಡಲೇ ಅನುದಾನ ಬಿಡುಗಡೆ ಮಾಡುತ್ತೇವೆ. ಈ ಅಧಿವೇಶನ ಮುಗಿಯುವ ಒಳಗೆ ಹಣ ಬಿಡುಗಡೆ ಮಾಡ್ತೀವಿ. ಈ ವರ್ಷ ಅಂದರೆ 2024-25ನೇ ಸಾಲಿನಲ್ಲಿ ರಾಜ್ಯದ 5 ಕಡೆ ನಡೆಯುವ ಕಂಬಳಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡುತ್ತೇವೆ. ಕ್ರೀಡೆಯೊಳಗೆ ನಾವು ರಾಜಕೀಯ ಮಾಡೋದಿಲ್ಲ ಎಂದು ಸಚಿವರು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಉದ್ಯೋಗ ಕಲ್ಪಿಸುವ ವಿಧೇಯಕ ತಡೆಹಿಡಿದು ಕನ್ನಡಿಗ, ಕರ್ನಾಟಕಕ್ಕೆ ಅಪಮಾನ: ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

Share This Article