ಗುವಾಹಟಿ: ದೇಶಾದ್ಯಂತ ಸದ್ದು ಮಾಡುತ್ತಿರುವ ಚೀನಾದ ಹ್ಯೂಮನ್ ಮೆಟಾನ್ಯೂಮೋ ವೈರಸ್ (HMPV) ಅಸ್ಸಾಂನ (Assam) 10 ತಿಂಗಳ ಮಗುವಿನಲ್ಲಿ ಪತ್ತೆಯಾಗಿದೆ.
ಮಗುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ದಿಬ್ರುಗಢ್ನಲ್ಲಿರುವ ಅಸ್ಸಾಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (AMCH) ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಮಕ್ಕಳಲ್ಲೇ ಪತ್ತೆಯಾದ ವೈರಸ್ – ಹೆಚ್ಎಂಪಿವಿ ಹಾನಿಕಾರಕವಲ್ಲ, ಭಯ ಪಡದಿರಿ… ನಿರ್ಲಕ್ಷ್ಯವೂ ಮಾಡದಿರಿ.!
Advertisement
Advertisement
ಕಳೆದ 4 ದಿನಗಳ ಹಿಂದೆಯಷ್ಟೇ ಶೀತ ಜ್ವರದಿಂದ ಬಳಲುತ್ತಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ರೋಗ ಲಕ್ಷಣಗಳನ್ನು ಪರಿಗಣಿಸಿ ಪರೀಕ್ಷೆಗೆ ಒಳಪಡಿಸಿದ ನಂತರ ಮಗುವಿನಲ್ಲಿ ಹೆಚ್ಎಂಪಿವಿ ಸೋಂಕು ಇರೋದು ದೃಢವಾಗಿದೆ ಎಂದು AMCH ಸೂಪರಿಂಟೆಂಡೆಂಟ್ ಧೃಬಜ್ಯೋತಿ ಭುಯಾನ್ ಹೇಳಿದ್ದಾರೆ. ಇದನ್ನೂ ಓದಿ: ಮಹಾ ಕುಂಭಮೇಳಕ್ಕೆ ವೈರಸ್ ಆತಂಕ – 100 ಬೆಡ್ಗಳ ಆಸ್ಪತ್ರೆ, ವೈದ್ಯರ ತಂಡ ನಿಯೋಜನೆ
Advertisement
ಈ ವರ್ಷದಲ್ಲಿ ಅಸ್ಸಾಂನಲ್ಲಿ ಕಾಣಿಸಿಕೊಂಡ ಮೊದಲ ಸೋಂಕು ಇದಾಗಿದೆ. ಆದಾಗ್ಯೂ ಇದು ಹೊಸದೇನಲ್ಲ ಎಂದು ವೈದ್ಯರು ಹೇಳಿದ್ದಾರೆ. 2001ರಲ್ಲಿ ಮೊದಲಬಾರಿಗೆ ಗುರುತಿಸಲಾದ ಈ ವೈರಸ್ ಹಲವು ವರ್ಷಗಳಿಂದ ಜಾಗತಿಕವಾಗಿ ಅಸ್ತಿತ್ವದಲ್ಲಿದೆ. 2014ರಲ್ಲಿ ಅಸ್ಸಾಂನಲ್ಲಿ ದಿಬ್ರುಗಢ ಜಿಲ್ಲೆಯಲ್ಲಿ 110 ಪ್ರಕರಣಗಳನ್ನು ಗುರುತಿಸಿದ್ದೆವು. ಪ್ರತಿ ವರ್ಷವೂ ಇದು ಪತ್ತೆಯಾಗುತ್ತಿದೆ. ಜನ ಆತಂಕ ಪಡುವ ಅಗತ್ಯವಿಲ್ಲ, ಮುನ್ನೆಚ್ಚರಿಕೆ ವಹಿಸಿದ್ರೆ ಸಾಕು ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: HMPV ಜಾಗತಿಕವಾಗಿ ಪರಿಚಲನೆಯಲ್ಲಿದೆ – ಐಸಿಎಂಆರ್ ಎಚ್ಚರಿಕೆ