ಶಿವಮೊಗ್ಗ: ನಗರದಲ್ಲಿ (Shivamogga) ಕಳೆದ ಸೆಪ್ಟೆಂಬರ್‌ನಿಂದ ನವೆಂಬರ್ ತಿಂಗಳವರೆಗೆ ಐವರು ಮಕ್ಕಳಲ್ಲಿ HMPV ಸೋಂಕು ತಗುಲಿರುವುದು ದೃಢವಾಗಿತ್ತು. ಈ ಮಕ್ಕಳು ಚಿಕಿತ್ಸೆ ಪಡೆದು ಗುಣವಾಗಿದ್ದಾರೆ. ಸೋಂಕಿನ ಕುರಿತು ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಎಮ್‌ಎಲ್‌ಸಿ ಹಾಗೂ ಮಕ್ಕಳ ತಜ್ಞ ಡಾ.ಧನಂಜಯ್ ಸರ್ಜಿ (Dr.Sarji)ತಿಳಿಸಿದ್ದಾರೆ.
ಸೋಂಕು ತಗುಲಿದ್ದ ಎಲ್ಲಾ ಮಕ್ಕಳು ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ಇದು ಸಾಮಾನ್ಯ ವೈರಸ್. ಕೆಮ್ಮು, ಶೀತ, ಜ್ವರ ಬರುತ್ತದೆ. ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳು, ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿರುವವರು, ಹಿರಿಯರು ಎಚ್ಚರಿಕೆ ವಹಿಸಬೇಕು. ಈ ವೈರಸ್ ಬಗ್ಗೆ ಜನ ಆತಂಕ ಪಡಬೇಕಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಚಿಕಿತ್ಸೆಗೆ ದಾಖಲಾಗಿದ್ದ ಮಕ್ಕಳ ಸ್ವ್ಯಾಬ್ ಪರೀಕ್ಷೆ ಮಾಡಿದಾಗ ಐವರಲ್ಲಿ ಹೆಚ್‌ಎಂಪಿವಿ ಸೋಂಕು ತಗುಲಿರುವುದು ಗೊತ್ತಾಗಿತ್ತು. ಅವರಿಗೆಲ್ಲ ಸೂಕ್ತ ಚಿಕಿತ್ಸೆ ನೀಡಲಾಗಿದೆ. ಜನ ಆತಂಕಪಡುವ ಅಗತ್ಯ ಇಲ್ಲ ಎಂದಿದ್ದಾರೆ.