ಬೆಂಗಳೂರು: ನಗರದ 8 ತಿಂಗಳ ಮಗುವಿನಲ್ಲಿ (8 Month Old Baby) ಹೆಚ್‌ಎಂಪಿ ವೈರಸ್ (HMPV) ಪತ್ತೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ (Health Department) ಅಲರ್ಟ್ ಆಗಿದ್ದು ಜಿಲ್ಲಾವಾರು ಮಾಹಿತಿಯನ್ನು ಕೇಳಿದೆ.
ಸರ್ಕಾರಿ ಅಥವಾ ಖಾಸಗಿ ಆಸ್ಫತ್ರೆಗಳಲ್ಲಿ ವೈರಸ್ ಪತ್ತೆಯಾದ ಬಗ್ಗೆ ಎಲ್ಲಾ ಡಿಹೆಚ್‌ಓಗಳಿಂದ ಆರೋಗ್ಯ ಇಲಾಖೆ ಮಾಹಿತಿ ಕೇಳಿದೆ. ಪ್ರತಿಯೊಂದು ಡೇಟಾ ಕೂಡ ಪತ್ತೆ ಮಾಡಬೇಕು. ವೈರಸ್ ಪತ್ತೆಯಾದ್ರೆ ಟ್ರಾವೆಲ್ ಹಿಸ್ಟರಿ ಪತ್ತೆ ಹಚ್ಚುವಂತೆ ಸೂಚನೆ ನೀಡಿದೆ. ಇದನ್ನೂ ಓದಿ: ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ HMPV ವೈರಸ್ ಪತ್ತೆ
Advertisement
Advertisement
ಏನು ಮಾಡಬೇಕು?
– ಕೆಮ್ಮುವಾಗ ಅಥವಾ ಸೀನುವಾಗ, ಬಾಯಿ ಮತ್ತು ಮೂಗನ್ನು ಕರವಸ್ತ್ರ ಅಥವಾ ಟಿಶ್ಯೂ ಪೇಪರ್‌ನಿಂದ ಮುಚ್ಚಿಕೊಳ್ಳಿ.
– ಕೈಗಳನ್ನು ಸಾಬೂನು ಮತ್ತು ನೀರು ಅಥವಾ ಆಲ್ಕೋಹಾಲ್ ಆಧಾರಿತ ಸ್ಯಾನಿಟೈಜರ್‌ನಿಂದ ಹೆಚ್ಚಾಗಿ ತೊಳೆಯಿರಿ.
– ಜನಸಂದಣಿ ಇರುವ ಸ್ಥಳಗಳನ್ನು ತಪ್ಪಿಸಿ.
– ಜ್ವರ, ಕೆಮ್ಮು ಮತ್ತು ಸೀನುವಿಕೆ ಇದ್ದಲ್ಲಿ ಸಾರ್ವಜನಿಕ ಸ್ಥಳಗಳಿಂದ ದೂರವಿರಿ.
– ಮನೆಯಲ್ಲಿಯೇ ಇರಿ ಮತ್ತು ನೀವು ಅನಾರೋಗ್ಯದಿಂದ ಬಳಲುತ್ತಿದ್ದರೆ ಇತರರೊಂದಿಗೆ ಸಂಪರ್ಕವನ್ನು ಮಿತಿಗೊಳಿಸಿ.
– ಸಾಕಷ್ಟು ನೀರು ಕುಡಿಯಿರಿ ಮತ್ತು ಪೌಷ್ಟಿಕ ಆಹಾರವನ್ನು ಸೇವಿಸಿ.
Advertisement
ಏನು ಮಾಡಬಾರದು?
– ಟಿಶ್ಯೂ ಪೇಪರ್ ಮತ್ತು ಕೈ ಕರ್ಚೀಫ್ ಮರುಬಳಕೆ.
– ಅನಾರೋಗ್ಯದ ಜನರೊಂದಿಗೆ ನಿಕಟ ಸಂಪರ್ಕ, ಟವೆಲ್, ಲಿನಿನ್ ಇತ್ಯಾದಿಗಳನ್ನು ಹಂಚಿಕೊಳ್ಳುವುದು.
– ಕಣ್ಣು, ಮೂಗು ಮತ್ತು ಬಾಯಿಯನ್ನು ಆಗಾಗ್ಗೆ ಸ್ಪರ್ಶಿಸುವುದು.
– ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು.
– ವೈದ್ಯರನ್ನು ಸಂಪರ್ಕಿಸದೆ ಔಷಧಿ ಸೇವಿಸುವುದು.