ಪಾಟ್ನಾ: ಬಿಹಾರದ ಪಾಟ್ನಾ ಜಂಕ್ಷನ್‍ನಲ್ಲಿ ಬಾಂಬ್ ಇಡಲಾಗಿದೆ ಎಂಬ ಬೆದರಿಕೆ ಕರೆ ಬಂದಿದ್ದು, ಕೆಲ ಕಾಲ ಪ್ರಯಾಣಿಕರಲ್ಲಿ ಆತಂಕವನ್ನು ಸೃಷ್ಟಿಸಿತ್ತು.
ಬಿಹಾರದ ಪಾಟ್ನಾ (Patna) ರೈಲ್ವೆ ನಿಲ್ದಾಣದಲ್ಲಿ (Railway Station) ಬಾಂಬ್ ಇಟ್ಟಿದ್ದೇವೆ ಎಂದು ಅಪರಿಚಿತ ನಂಬರ್‌ನಿಂದ ಅಲ್ಲಿನ ಅಧಿಕಾರಿಗಳಿಗೆ ಕರೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೆಲ ಕಾಲ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿದ್ದು, ಅಧಿಕಾರಿಗಳಲ್ಲೂ ಗೊಂದಲ ಉಂಟಾಗಿದೆ. ಆದರೆ ಅಲ್ಲಿನ ರೈಲ್ವೆ ಅಧಿಕಾರಿಗಳು ವಿಷಯ ತಿಳಿದ ತಕ್ಷಣ ರೈಲ್ವೆ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಿದ್ದು, ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿದ್ದಾರೆ.
Advertisement
Advertisement
ಘಟನೆಗೆ ಸಂಬಂಧಿಸಿ ಅವರು ಶೋಧ ಕಾರ್ಯಾಚರಣೆ ಹಾಗೂ ತನಿಖೆಯನ್ನು ನಡೆಸಿದ್ದಾರೆ. ಅದಾದ ಬಳಿಕ ಇದು ಹುಸಿ ಬಾಂಬ್ (Hoax Bomb) ಕರೆ ಎಂಬುದು ಖಚಿತವಾಗಿದ್ದು, ಅಲ್ಲಿದ್ದ ಪ್ರಯಾಣಿಕರು ನಿರಾಳರಾಗಿದ್ದಾರೆ. ಇದನ್ನೂ ಓದಿ: ನನಗೂ ರಾಜಕೀಯಕ್ಕೂ ಆಗಿ ಬರಲ್ಲ : ಶಿವರಾಜ್ ಕುಮಾರ್
Advertisement
Advertisement
ಘಟನೆಗೆ ಸಂಬಂಧಿಸಿ ಪಾಟ್ನಾ ರೈಲ್ವೆ ಜಂಕ್ಷನ್‍ನ ಉಸ್ತುವಾರಿ ರಂಜಿತ್ ಕುಮಾರ್ ಮಾತನಾಡಿ, ಯಾವುದೇ ಬಾಂಬ್ ಪತ್ತೆಯಾದ ಬಗ್ಗೆ ನಮಗೆ ಮಾಹಿತಿ ಬಂದಿಲ್ಲ. ನಾವು ವಿಶೇಷ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಓದಿದ್ದು 8ನೇ ತರಗತಿ, ಆದ್ರೆ IPS ಅಧಿಕಾರಿ ಎಂದು ಮಹಿಳೆಯರನ್ನು ನಂಬಿಸಿ ಲಕ್ಷ ಲಕ್ಷ ಹಣ ದೋಚಿದ