ಬೆಂಗಳೂರು: ಕರ್ನಾಟಕದಲ್ಲಿ ಉತ್ತಮ ಮುಂಗಾರು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಹೆಚ್ಚುವರಿ ನೀರು ಹರಿಯುತ್ತಿರುವುದರಿಂದ ತಮಿಳುನಾಡಿನ ಹೊಗೆನೆಕಲ್ ಪ್ರವಾಸಿ ತಾಣದಲ್ಲಿ ಪ್ರವಾಸಿಗರ ವೀಕ್ಷಣೆಗೆ ಬ್ರೇಕ್ ಹಾಕಲಾಗಿದೆ.
ಕರ್ನಾಟಕ ಕಬಿನಿನಿ ಜಲಾಶಯದಿಂದ ನೀರು ಬಿಡುಗಡೆ ಮಾಡಿರುವ ಹಿನ್ನಲೆಯಲ್ಲಿ ಹೊಗೆನೆಕಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಹೊಗೆನಕಲ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅಪಾಯದ ಮಟ್ಟದಲ್ಲಿ ಕಾವೇರಿ ನೀರು ಹರಿಯುತ್ತಿರುವುದರಿಂದ ಮುಂಜಾಗ್ರತೆಯ ಕ್ರಮವಾಗಿ ತಮಿಳುನಾಡಿನ ಜಿಲ್ಲಾಡಳಿತದಿಂದ ಆದೇಶ ಹೊರಡಿಸಲಾಗಿದೆ. ಇಲ್ಲಿಗೆ ಕರ್ನಾಟಕದ ಪ್ರವಾಸಿಗರೇ ಹೆಚ್ಚಾಗಿ ಹೋಗುವುದರಿಂದ ಮುಂಜಾಗ್ರತಾ ಕ್ರಮವಾಗಿ ನಿರ್ಬಂಧ ಹೇರಲಾಗಿದೆ.
Advertisement
Advertisement
ಇನ್ನು ಕಳೆದ ಒಂದು ವಾರದಿಂದ ಸುರಿದ ಮಳೆಗೆ ಮಲೆನಾಡಿನ ನದಿಗಳು ಮೈದುಂಬಿಹರಿಯುತ್ತಿದ್ದು, ವಿಶ್ವವಿಖ್ಯಾತ ಜೋಗ ಜಲಪಾತ ಸಹ ತುಂಬಿ ಹರಿಯುತ್ತಿದೆ. ರಾಜಾ, ರೋರರ್, ರಾಕೆಟ್, ರಾಣಿ ಧುಮ್ಮಿಕ್ಕುತ್ತಿವೆ. ಶರಾವತಿ ನದಿ ಜಲಾನಯನ ಪ್ರದೇಶಗಳಾದ ಹೊಸನಗರ, ಸಾಗರ ತಾಲೂಕುಗಳಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆ ಆಗುತ್ತಿರುವುದು ಜಲಪಾತ ಕಳೆಕಟ್ಟಲು ಕಾರಣವಾಗಿದೆ.