ಹೊಳೆನರಸೀಪುರ‌ ರೇಪ್ ಕೇಸ್ – 2ನೇ ಬಾರಿಯೂ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ

Public TV
1 Min Read
PRAJWAL REVANNA 1

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಹೊಳೆನರಸೀಪುರ (Holenarasipura) ಟೌನ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದ ಜಾಮೀನು ಅರ್ಜಿ ವಜಾಗೊಂಡಿದೆ.

ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎರಡನೇ ಬಾರಿಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್‌ ಸೂಚನೆ ಮೇರೆಗೆ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮೊರೆ ಹೋಗಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ಅರ್ಜಿಯನ್ನು ವಜಾಗೊಳಿಸಿದೆ. ಇದನ್ನೂ ಓದಿ: ಕೋರ್ಟ್‌ನಲ್ಲಿ ತನ್ನದೇ ವಿಡಿಯೋ ನೋಡಿದ ಪ್ರಜ್ವಲ್‌ ರೇವಣ್ಣ

ಈ ಪ್ರಕರಣದಲ್ಲಿ  ಪ್ರಜ್ವಲ್‌ ರೇವಣ್ಣ ಜಾಮೀನು ಕೋರಿ ಮೊದಲ ಬಾರಿಗೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ ವಜಾಗೊಳಿಸಿತ್ತು. ಬಳಿಕ ಪ್ರಜ್ವಲ್‌ ಜಾಮೀನು ಕೋರಿ ಕಳೆದ ಜೂನ್‌ನಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಹೈಕೋರ್ಟ್‌, ವಿಚಾರಣಾಧೀನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವಂತೆ ಸೂಚಿಸಿತ್ತು. ಅದರಂತೆ ಪ್ರಜ್ವಲ್‌ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎರಡನೇ ಬಾರಿಗೆ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಅತ್ಯಾಚಾರ ಕೇಸ್‌- ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ

Share This Article