ಚಿಕ್ಕಮಗಳೂರು: ದತ್ತಪೀಠದಲ್ಲಿ (Datta Peeta) ಸಾಂಪ್ರದಾಯಿಕ ಹೋಳಿ (Holi) ಆಚರಣೆಗೆ ಹಿಂದೂ ಸಂಘಟನೆಗಳು ಮುಂದಾಗಿದ್ದು, ಜಿಲ್ಲಾಡಳಿತ ಅನುಮತಿ ನಿರಾಕರಿಸಿದೆ.
ಹೋಳಿ ಹುಣ್ಣಿಮೆ ಹಿನ್ನೆಲೆ, ಹಿಂದೂ ಸಂಘಟನೆಗಳು ದತ್ತಪೀಠದಲ್ಲಿ ಹೋಳಿ ಆಚರಣೆಗೆ ಸಿದ್ಧತೆ ಮಾಡಿಕೊಂಡಿದ್ದವು. ಅಲ್ಲದೇ ಔಂದುಬರ ವೃಕ್ಷದ ಬಳಿ ಹೋಳಿ ಆಚರಣೆಗೆ ಅನುಮತಿ ಕೇಳಲಾಗಿತ್ತು. ಮಾ.15ರಿಂದ 3 ದಿನಗಳ ಕಾಲ ದತ್ತಪೀಠದಲ್ಲಿ ಉರುಸ್ ಆಚರಣೆ ನಡೆಯಲಿದ್ದು, ಹೋಳಿ ಆಚರಣೆಗೆ ಅನುಮತಿ ನೀಡಲು ಜಿಲ್ಲಾಡಳಿತ ನಿರಾಕರಿಸಿದೆ. ಇದನ್ನೂ ಓದಿ: ಟಿಕೆಟ್ ಕಳೆದುಕೊಂಡು ವರ್ಷವಾಯ್ತು, ಜನರ ಆಶೀರ್ವಾದ ಇವತ್ತಿಗೂ ಹಾಗೇ ಇದೆ: ಪ್ರತಾಪ್ ಸಿಂಹ
ಉರುಸ್ ಹಿನ್ನೆಲೆ ದತ್ತಪೀಠ ಹಾಗೂ ಚಿಕ್ಕಮಗಳೂರು ನಗರದಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ. 800ಕ್ಕೂ ಅಧಿಕ ಪೊಲೀಸರಿಂದ ಭಾರೀ ಭದ್ರತೆ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಹಾವೇರಿಯಲ್ಲಿ ಹಿಂದೂ ಯುವತಿ ಹತ್ಯೆ – ಪೊಲೀಸರಿಂದ ನಯಾಜ್ ಅರೆಸ್ಟ್