ಧಾರವಾಡ: ಜಿಲ್ಲೆಯಲ್ಲಿ ಹೋಳಿ ಹಬ್ಬದ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಬರುವ ಹಿತದೃಷ್ಟಿಯಿಂದ ಮಾರ್ಚ್ 17 ರಿಂದ 21 ರವರೆಗೆ ವಿವಿಧ ತಾಲೂಕುಗಳ ವ್ಯಾಪ್ತಿಯಲ್ಲಿ ಮದ್ಯಪಾನ ಮತ್ತು ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.
Advertisement
ನಗರದ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಅವರು ಆದೇಶ ಹೊರಡಿಸಿದ್ದಾರೆ. ಮಾರ್ಚ್ 17 ರಿಂದ 20 ರವರೆಗೆ ಧಾರವಾಡ ಗ್ರಾಮೀಣ ತಾಲ್ಲೂಕು, ಹುಬ್ಬಳ್ಳಿ ಗ್ರಾಮೀಣ ತಾಲೂಕು, ನವಲಗುಂದ ತಾಲ್ಲೂಕು, ಅಣ್ಣಿಗೇರಿ ತಾಲ್ಲೂಕು, ಅಳ್ನಾವರ, ಧಾರವಾಡ ತಾಲೂಕಿನ ಮುಳಮುತ್ತಲ ಗ್ರಾಮಗಳಲ್ಲಿ ನಿಷೇಧಿಲಾಗಿದೆ. ಇದನ್ನೂ ಓದಿ: ನಾಯಕರಷ್ಟೇ ನಮಗೂ ಸಮಾನ ಅವಕಾಶ ಬೇಕು: ಕೃತಿ ಸನೋನ್
Advertisement
Advertisement
ಮಾರ್ಚ್ 16 ರಿಂದ 19 ರವರೆಗೆ ಕುಂದಗೋಳ ತಾಲೂಕು, ಅಳ್ನಾವರ ತಾಲೂಕು, ಹುಬ್ಬಳ್ಳಿ ಗ್ರಾಮೀಣ ತಾಲೂಕಿನ ಗ್ರಾಮಗಳಾದ ಸುಳ್ಳ ಮತ್ತು ಕಿರೇಸೂರು ಗ್ರಾಮಗಳಲ್ಲಿ, ಮಾರ್ಚ್ 19 ರಿಂದ 22 ರವರೆಗೆ ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದಲ್ಲಿ ಮದ್ಯಪಾನ ಮತ್ತು ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಇದನ್ನೂ ಓದಿ: ಮಿಸ್ ವರ್ಲ್ಡ್ 2021: ಭಾರತೀಯ ಮೂಲದ ಶ್ರೀಸೈನಿ ರನ್ನರ್ ಅಪ್, ಕರೋಲಿನಾ ಬಿಲಾವ್ಸ್ಕಾಗೆ ‘ವಿಶ್ವ ಸುಂದರಿ’ ಕಿರೀಟ