ಹುಬ್ಬಳಿ: ಇಷ್ಟು ದಿನ ತಣ್ಣಗಾಗಿದ್ದ ಹುಬ್ಬಳಿ (Hubballi) ರಾಣಿ ಚೆನ್ನಮ್ಮ (Rani Chennamma) ಈದ್ಗಾ ಮೈದಾನದಲ್ಲಿ (Idgah Maidan) ಮತ್ತೆ ವಿವಾದದ ಕಿಡಿ ಹೊತ್ತಿಕೊಂಡಿದೆ. ಕಾಮಣ್ಣನ ಪ್ರತಿಷ್ಠಾಪನೆಗೆ ಹಿಂದೂಪರ ಸಂಘಟನೆಗಳ ಮನವಿಗೆ ಮಹಾನಗರ ಪಾಲಿಕೆಯ ದ್ವಂದ್ವ ನೀತಿಯಿಂದಾಗಿ ಮತ್ತೆ ಈದ್ಗಾ ಮೈದಾನ ಸುದ್ದಿಯಾಗಿದೆ.
Advertisement
ಹಿಂದೂಪರ ಸಂಘಟನೆಗಳ ಮನವಿಯ ಮೇರೆಗೆ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಪಾಲಿಕೆ ಮೆಯರ್ ಈರೇಶ್ ಅಂಚಟಗೇರಿ ಅನುಮತಿ ನೀಡಿದ್ದರು. ಆದರೆ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಅನುಮತಿ ನೀಡಲು ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ನಿರಾಕರಣೆ ಮಾಡಿದ್ದಾರೆ. ಆಯುಕ್ತರ ನಿರ್ಧಾರಕ್ಕೆ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಮಾಡಾಳ್ ಭ್ರಷ್ಟಾಚಾರ ಪಕ್ಷಕ್ಕೆ ಮುಜುಗರ; ಆರೋಪಿಗಳ ಪರ ಜೈಕಾರ ಹಾಕೋದು ಡಿಕೆಶಿ ಸಂಸ್ಕೃತಿ – ಸಿ.ಟಿ ರವಿ
Advertisement
Advertisement
ಅನುಮತಿ ನೀಡಿದರೆ ಈದ್ಗಾ ಮೈದಾನದ ಆವರಣದೊಳಗೆ ಕಾಮಣ್ಣನ ಕೂರಿಸುತ್ತೇವೆ. ಇಲ್ಲದಿದ್ದರೆ ಮೈದಾನದ ಹೊರಗಡೆಯೇ ಮೂರ್ತಿ ಪ್ರತಿಷ್ಠಾಪನೆ ಮಾಡುತ್ತೇವೆ. ಮೂರು ದಿನಗಳ ಕಾಲ ಹೋಳಿ (Holi) ಆಚರಣೆ ಮಾಡುತ್ತೇವೆ ಎಂದು ಮೈದಾನದ ಎದುರು ಪ್ರತಿಭಟಿಸಿ ಪಾಲಿಕೆಗೆ ಎಚ್ಚರಿಕೆ ನೀಡಿವೆ. ಪ್ರತಿಭಟನೆ ಬೆನ್ನಲ್ಲೇ ಮೈದಾನಕ್ಕೆ ಬಿಗಿ ಪೊಲೀಸ್ ಭದ್ರತೆ ಹಾಕಲಾಗಿದೆ. ಈ ಹಿಂದೆ ಗಣಪತಿ ಪ್ರತಿಷ್ಠಾಪನೆ (Ganesh Chaturth) ವಿಚಾರದಲ್ಲಿ ಈದ್ಗಾ ಮೈದಾನ ಸುದ್ದಿಯಾಗಿತ್ತು. ಇದನ್ನೂ ಓದಿ: ಕಲರ್ ಎರಚಬೇಡಿ ಎಂದಿದ್ದಕ್ಕೆ ವೃದ್ಧೆಯ ಕೊಂದೇ ಬಿಟ್ಟ ಯುವಕರು!