ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ (Dakshina Kannada Rain) ಹಿನ್ನೆಲೆಯಲ್ಲಿ ಗುರುವಾರವೂ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ (School-College Holiday) ರಜೆ ಘೋಷಿಸಲಾಗಿದೆ.
ಮಳೆ ಕಾರಣಕ್ಕೆ ಸತತ ಮೂರು ದಿನಗಳಿಂದ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಹವಾಮಾನ ಇಲಾಖೆ ಮಳೆ ಮುಂದುವರಿಯುವ ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: Mysuru Bengaluru Expressway ಪ್ರಯಾಣಕ್ಕೆ ಸ್ಪೀಡ್ ಲಿಮಿಟ್ – 100 ಕಿಮೀ ವೇಗ ದಾಟಿದ್ರೆ ಫೈನ್!
Advertisement
Advertisement
ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಜು.6 ರಂದು ರಜೆ ಘೋಷಿಸಲಾಗಿದೆ.
Advertisement
Advertisement
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗೃತಿ ವಹಿಸಬೇಕು ಎಂದು ಎಚ್ಚರಿಕೆ ಸಹ ನೀಡಲಾಗಿದೆ. ಇದನ್ನೂ ಓದಿ: ವಾಹನ ಸವಾರರಿಗೆ ಮತ್ತೆ ಗುಡ್ ನ್ಯೂಸ್ – ಟ್ರಾಫಿಕ್ ಫೈನ್ ಡಿಸ್ಕೌಂಟ್ ಅವಧಿ ವಿಸ್ತರಿಸಿದ ಸರ್ಕಾರ
Web Stories