ಕೊಪ್ಪಳ: ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್‌ಗೇಟ್‌ಗಳ ಲೋಕಾರ್ಪಣೆ ಕಾರ್ಯಕ್ರಮ ಜೂ. 25ರಂದು ನಡೆಯಲಿರುವ ಕಾರಣ ಮುನಿರಾಬಾದ್‌ನಲ್ಲಿರುವ (Munirabad) ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಸರ್ಕಾರಿ ಕಾರ್ಯಕ್ರಮವಾದ ಕಾರಣ ಮುನಿರಾಬಾದ್‌ನ ಎಲ್ಲ ಶಾಲೆಗಳಿಗೆ ಗುರುವಾರ (ಜೂ 25) ರಜೆ ಇರಲಿದ್ದು, ಮತ್ತೊಂದು ರಜೆಯ ದಿನ ಶಾಲೆ ನಡೆಸಲಾಗುವುದು ಎಂದು ಡಿಡಿಪಿಐ ಸೋಮಶೇಖರಗೌಡ ಪಾಟೀಲ್ ತಿಳಿಸಿದ್ದಾರೆ. ಇದನ್ನೂ ಓದಿ: ನಾಳೆ ಟಿಬಿ ಡ್ಯಾಂನ ನೂತನ ಕ್ರಸ್ಟ್ ಗೇಟ್‌ಗಳ ಲೋಕಾರ್ಪಣೆ – ಸಂಸದರು, ಶಾಸಕರಿಂದ ಅಂತಿಮ ಹಂತದ ಸಿದ್ಧತೆ ಪರಿಶೀಲನೆ
ಕಾರ್ಯಕ್ರಮ ಮುನಿರಾಬಾದ್‌ನ ಪ್ರೌಢಶಾಲಾ ಮೈದಾನದಲ್ಲಿ ನಿಗದಿಯಾಗಲಿದೆ. ಕರ್ನಾಟಕ, ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಹಾಗೂ ರಾಜ್ಯದ ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, 10ರಿಂದ 15 ಸಾವಿರ ಜನ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಮಾಡಲಾಗಿದೆ.
