ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ (ಜುಲೈ 18) ರಜೆ ಘೋಷಿಸಲಾಗಿದೆ.
ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಈ ಆದೇಶ ಹೊರಡಿಸಿದ್ದಾರೆ.
ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ ಘೋಷಿಸಿ ಡಿಸಿ ಹೆಚ್.ವಿ ದರ್ಶನ್ ಆದೇಶ ಹೊರಡಿಸಿದ್ದಾರೆ.
