LatestMain PostNational

ಮಕ್ಕಳಲ್ಲಿ ವಿಪರೀತ ಜ್ವರ – ಸೆ.25 ರವರೆಗೆ ಶಾಲೆಗಳಿಗೆ ರಜೆ ಘೋಷಿಸಿದ ಪುದುಚೇರಿ ಸರ್ಕಾರ

ಪುದುಚೇರಿ: ಶಾಲಾ (School) ಮಕ್ಕಳಲ್ಲಿ (Childrens)  ಜ್ವರ (Fever)  ಕಾಣಿಸಿಕೊಳ್ಳುತ್ತಿರುವ ಪರಿಣಾಮ ಇಂದಿನಿಂದ ಸೆಪ್ಟೆಂಬರ್ (September) 25 ರವರೆಗೆ ಒಂದರಿಂದ 8ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪುದುಚೇರಿ (Puducherry) ಸರ್ಕಾರ ರಜೆ ಘೋಷಿಸಿದೆ.

ಪುದುಚೇರಿ ಮತ್ತು ಕಾರೈಕಲ್ ಪ್ರದೇಶ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ವಿ.ಜಿ ಶಿವಗಾಮಿ ಸೆಪ್ಟೆಂಬರ್ 17 ರಿಂದ 25ರ ವರಗೆ ರಜೆ ಘೋಷಿಸಿ ಸುತ್ತೋಲೆ ಹೊರಡಿಸಿದ್ದಾರೆ. ಆರೋಗ್ಯ ಇಲಾಖೆಯ ಶಿಫಾರಸಿನ ಮೇರೆಗೆ ಶಾಲೆಗಳನ್ನು ಮುಚ್ಚಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಕಳೆದ 10 ದಿನಗಳಲ್ಲಿ, ಮಕ್ಕಳಲ್ಲಿ ಜ್ವರ ಸಮಸ್ಯೆ ಕಾಡುತ್ತಿದೆ. ಸಣ್ಣ ಮಕ್ಕಳಲ್ಲಿ ಜ್ವರ ಪ್ರಕರಣ ಏರಿಕೆಯಾಗುತ್ತಿದ್ದು, ಆಸ್ಪತ್ರೆಗಳಲ್ಲಿ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ ಎಂದು ಆರೋಗ್ಯ ಇಲಾಖೆಯಿಂದ ವರದಿಯಾಗಿದೆ. ಇದನ್ನೂ ಓದಿ: ಪ್ರಧಾನಿ ಮೋದಿ ಅವರಿಗೆ 72ರ ಸಂಭ್ರಮ – ನಮೀಬಿಯಾದಿಂದ ಭಾರತಕ್ಕೆ 8 ಚಿರತೆಗಳು

ಸರ್ಕಾರಿ ಸ್ವಾಮ್ಯದ ರಾಜೀವ್ ಗಾಂಧಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜ್ವರ, ಕೆಮ್ಮು ಮತ್ತು ಶೀತ ಬಾಧೆಯಿಂದ ಈಗಾಗಲೇ ಸಾಕಷ್ಟು ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ. ದಿನದಿಂದ ದಿನಕ್ಕೆ ಮಕ್ಕಳ ಆರೋಗ್ಯ ಸಮಸ್ಯೆ ಹೆಚ್ಚಾಗುತ್ತಿರುವುದರಿಂದ ಸರ್ಕಾರ ಈ ಬಗ್ಗೆ ಗಂಭೀರವಾಗಿ ಚಿಂತಿಸಿ ಶಾಲೆಗಳಿಗೆ ರಜೆ ನೀಡಲು ಮುಂದಾಗಿದೆ. ಇದನ್ನೂ ಓದಿ: ಮಹಾಗಣಪತಿ ವಿಸರ್ಜನೆ – ಶಾಲಾ-ಕಾಲೇಜ್‍ಗಳಿಗೆ ರಜೆ, 4 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ

Live Tv

Leave a Reply

Your email address will not be published. Required fields are marked *

Back to top button