ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ನಾಳೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ನಾಳೆ (ಆ.1) ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಪಶ್ಚಿಮ ಘಟ್ಟದಲ್ಲಿ ವರುಣನ ಅಬ್ಬರ – ಬತ್ತಿಹೋಗಿದ್ದ ಭೀಮೆಯ ಒಡಲು ಒಂದೇ ದಿನದಲ್ಲಿ ಭರ್ತಿ

ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗೆ ಹಾಗೂ ಐಟಿಐ, ಡಿಫ್ಲೋಮಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳಿಗೆ ರಜೆ ಅನ್ವಯವಾಗಲಿದೆ.
