ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಅಬ್ಬರದ ಮಳೆ ಹಿನ್ನೆಲೆ ಕಾರವಾರ (Karwar) ತಾಲೂಕಿನಾದ್ಯಂತ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಕರಾವಳಿ ಭಾಗದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಬಿರುಸಿನ ಮಳೆಯಾಗುತ್ತಿದೆ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಮಳೆ ಅಬ್ಬರ; ನಾಳೆ ರೆಡ್ ಅಲರ್ಟ್ ಘೋಷಣೆ, ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಪರಿಣಾಮ ಬುಧವಾರ ಶಿರಸಿ-ಕುಮತಾ ರಾಷ್ಟ್ರೀಯ ಹೆದ್ದಾರಿಯ ದೇವಿಮನೆ ಘಟ್ಟದಲ್ಲಿ ಭೂಕುಸಿತ ಉಂಟಾಗಿತ್ತು. ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.
