ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೊಪ್ಪ, ಶೃಂಗೇರಿ ಅಂಗನವಾಡಿ-ಶಾಲೆಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ.
ಈ ಎರಡು ತಾಲೂಕುಗಳ ಅಂಗನವಾಡಿ, ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಆದೇಶ ಹೊರಡಿಸಿದ್ದಾರೆ.
ಅಪಾಯದ ಮಟ್ಟ ಮೀರಿ ತುಂಗಾ ನದಿ ಹರಿಯುತ್ತಿದೆ. ಜನಸಾಮಾನ್ಯರು ಹಾಗೂ ಪ್ರವಾಸಿಗರು ನದಿ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.
