ಶಿವಮೊಗ್ಗ: ಮಲೆನಾಡು ಶಿವಮೊಗ್ಗದಲ್ಲಿ (Shivamogga) ಮಳೆ ಆರ್ಭಟ ಮುಂದುವರಿದಿದೆ. ಸಾಗರ (Sagara) ತಾಲೂಕು ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಆ.3ರ ಸೋಮವಾರ ಅಂಗನವಾಡಿ, ಪ್ರಾಥಮಿಕ & ಫ್ರೌಡಶಾಲೆ, ಪದವಿ ಪೂರ್ವ ಹಾಗೂ ಡಿಪ್ಲೊಮಾ & ಐಟಿಐ ಕಾಲೇಜಿಗೆ ರಜೆ ಘೋಷಿಸಿ ತಹಸೀಲ್ದಾರ್ ಡಾ. ಪ್ರತಿಭಾ ಆದೇಶ ಹೊರಡಿಸಿದ್ದಾರೆ. ಶಾಲಾ ಮಕ್ಕಳು ಹಾಗೂ ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ – ಉಡುಪಿಗೆ ಆರೆಂಜ್ ಅಲರ್ಟ್ ಘೋಷಣೆ
ತೀರ್ಥಹಳ್ಳಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
ತೀರ್ಥಹಳ್ಳಿ ತಾಲೂಕು ವ್ಯಾಪ್ತಿಯಲ್ಲಿ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ರಂಜಿತ್ ಆದೇಶ ಹೊರಡಿಸಿದ್ದಾರೆ. ತೀರ್ಥಹಳ್ಳಿ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ ಹಿನ್ನೆಲೆ ಶಾಲಾ ಮಕ್ಕಳು ಹಾಗೂ ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ. ತೀರ್ಥಹಳ್ಳಿ, ಆಗುಂಬೆ, ಮೇಗರವಳ್ಳಿ ಸೇರಿದಂತೆ ತಾಲೂಕಿನಾದ್ಯಂತ ಭಾರೀ ಮಳೆ ಹಿನ್ನೆಲೆ ಈ ಕ್ರಮಕೈಗೊಳ್ಳಲಾಗಿದೆ.
