ಬೆಂಗಳೂರು: ಕೊರೊನಾ ವೈರಸ್ ಆತಂಕ ಹೆಚ್ಚಾದ ಹಿನ್ನೆಲೆಯಲ್ಲಿ 5 ವರ್ಷದ ಕೆಳಗಿನ ಶಾಲೆಗೆ ಹೋಗುವ ಮಕ್ಕಳಿಗೆ ಒಂದು ತಿಂಗಳು ರಜೆ ಕೊಡಲಾಗುವುದು ಎಂದು ವೈದ್ಯಕೀಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಚಿಕ್ಕ ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರಲಿದೆ. ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ವೈದ್ಯಕಿಯ ಇಲಾಖೆ ಸಮಕ್ಷಮದಲ್ಲಿ ರಜೆ ಘೋಷಣೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ನಾವು ಈಗಾಗಲೇ ಮುನ್ನೆಚ್ಚರಿಕೆ ಮತ್ತು ಮಾರ್ಗಸೂಚಿಯನ್ನು ನೀಡಿದ್ದೇವೆ ಎಂದು ತಿಳಿಸಿದರು.
Advertisement
— S.Suresh Kumar (@nimmasuresh) March 8, 2020
Advertisement
5 ವರ್ಷದೊಳಗಿನ ಮಕ್ಕಳಿಗೆ ಮಾರ್ಚ್ 31ರವರೆಗೆ ರಜೆ ಘೋಷಿಸಲಾಗಿದೆ. ಹೀಗಾಗಿ ಬೇಸಿಗೆ ರಜೆ ಮುಗಿದ ನಂತರವೇ 5 ವರ್ಷದೊಳಗಿನ ಮಕ್ಕಳಿಗೆ ಶಾಲೆ ಆರಂಭವಾಗಲಿವೆ. ಪ್ರಿನರ್ಸರಿ, ಎಲ್‍ಕೆಜಿ ಮತ್ತು ಯುಕೆಜಿ ಕಲಿಯುತ್ತಿರುವ ರಾಜ್ಯದ ಎಲ್ಲ ಮಕ್ಕಳಿಗೆ ರಜೆ ಸಿಗಲಿದೆ.
Advertisement
Further to the advice received from the Health Commissioner, holidays have been declared for KJG/UKG classes in Bengaluru North, South & Rural Districts.
— S.Suresh Kumar (@nimmasuresh) March 8, 2020
Advertisement
ಈ ಕುರಿತು ಟ್ವೀಟ್ ಮಾಡಿರುವ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು, ಆರೋಗ್ಯ ಆಯುಕ್ತರ ಸಲಹೆ ಮೇರೆಗೆ ಬೆಂಗಳೂರು ಉತ್ತರ, ದಕ್ಷಿಣ ಮತ್ತು ಗ್ರಾಮಾಂತರ ಜಿಲ್ಲೆಗಳ ಯುಕೆಜಿ, ಎಲ್‍ಕೆಜಿ ಶಾಲೆಗಳಿಗೆ ಇಂದಿನಿಂದ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದರು.