ರಾಜಮೌಳಿ (Rajamouli) ನಿರ್ದೇಶನದ ಆರ್.ಆರ್.ಆರ್ (R.R.R) ಸಿನಿಮಾ ಅಂತಾರಾಷ್ಟ್ರೀಯ ಮಟ್ಟದ ಮತ್ತೊಂದು ಪ್ರಶಸ್ತಿಯನ್ನು ಬಾಚಿಕೊಂಡಿದೆ. ನಾಲ್ಕು ವಿಭಾಗದಲ್ಲಿ ಈ ಸಿನಿಮಾ ಹಾಲಿವುಡ್ ಕ್ರಿಟಿಕ್ಸ್ ಅವಾರ್ಡ್ (Hollywood Critics Award) ಪಡೆದುಕೊಂಡಿದೆ. ಈ ಮೂಲಕ ಬೆಸ್ಟ್ ಒರಿಜಿನಲ್ ಸಾಂಗ್ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿಗಾಗಿ ಪೈಪೋಟಿ ನಡೆಸುತ್ತಿರುವ ಚಿತ್ರವು ಆಸ್ಕರ್ ಗಾಗಿ ಮತ್ತಷ್ಟು ನಿರೀಕ್ಷೆ ಮೂಡಿಸಿದೆ.
Advertisement
ಹಾಲಿವುಡ್ ವಿಮರ್ಶಕರು ನೀಡುವ ಹಾಲಿವುಡ್ ಕ್ರಿಟಿಕ್ಸ್ ಅವಾರ್ಡ್ ‘ಆರ್.ಆರ್.ಆರ್’ ಸಿನಿಮಾಗೆ ನಾಲ್ಕು ವಿಭಾಗದಲ್ಲಿ ಪ್ರಶಸ್ತಿ ಬಂದಿದ್ದು, ಅತ್ಯುತ್ತಮ ಸಿನಿಮಾ, ಅತ್ಯುತ್ತಮ ಒರಿಜಿನಲ್ ಸಾಂಗ್, ಅತ್ಯುತ್ತಮ ವಿದೇಶಿ ಸಿನಿಮಾ ಹಾಗೂ ಅತ್ಯುತ್ತಮ ಸ್ಟಂಟ್ಸ್ ವಿಭಾಗದಲ್ಲಿ ಪ್ರಶಸ್ತಿಗಳನ್ನು ಅದು ಬಾಚಿದೆ. ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಿರ್ದೇಶಕ ರಾಜಮೌಳಿ, ನಟ ರಾಮ್ ಚರಣ್ ತೇಜ ಭಾಗಿಯಾಗಿದ್ದರು. ಇದನ್ನೂ ಓದಿ:ಅಪ್ಪು ಹೆಸರಿನಲ್ಲಿ ಮಕ್ಕಳ ಚಿತ್ರೋತ್ಸವ: ಅದ್ಧೂರಿ ಚಾಲನೆ
Advertisement
Advertisement
ಬಾಕ್ಸ್ ಆಫೀಸಿನಲ್ಲಿ ಸಾವಿರಾರು ಕೋಟಿ ಗಳಿಕೆ ಮಾಡಿರುವ ಈ ಸಿನಿಮಾ, ಪ್ರಶಸ್ತಿಯಲ್ಲೂ ಹಿಂದೆ ಬೀಳುತ್ತಿಲ್ಲ. ಗೋಲ್ಡನ್ ಗ್ಲೋಬ್ ಸೇರಿದಂತೆ ಹಲವು ಪ್ರತಿಷ್ಠಿತ ಪ್ರಶಸ್ತಿಗಳನ್ನು ಅದು ತನ್ನದಾಗಿಸಿಕೊಂಡಿದೆ. ಆಸ್ಕರ್ ಪ್ರಶಸ್ತಿಗಾಗಿ ಸಾಕಷ್ಟು ನಿರೀಕ್ಷೆ ಹೊಂದಲಾಗಿದೆ. ಈ ನಡುವೆ ನಾಲ್ಕು ಪ್ರಶಸ್ತಿಗಳನ್ನು ಪಡೆಯುವ ಮೂಲಕ ಚಿತ್ರತಂಡ ಬೀಗಿದೆ. ಜೊತೆಗೆ ಮಾರ್ಚ್ 12 ರಂದು ನಡೆಯುವ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲೂ ಇಂಥದ್ದೊಂದು ಸನ್ನಿವೇಶ ಸೃಷ್ಟಿಯಾಗಲಿ ಎಂದು ಪ್ರಾರ್ಥಿಸುತ್ತಿದೆ.
Advertisement
ಸ್ವಾತಂತ್ರ್ಯ ಹೋರಾಟಗಾರರಾದ ಕೋಮುರಂ ಭೀಮ್ ಮತ್ತು ಅಲ್ಲೂರಿ ಸೀತಾರಾಮ ರಾಜು ಅವರ ಬದುಕನ್ನು ಆಧಾರವಾಗಿಟ್ಟುಕೊಂಡು ತಯಾರಾದ ಕಾಲ್ಪನಿಕ ಸಿನಿಮಾವಿದು. ಈ ಸಿನಿಮಾದಲ್ಲಿ ಮೊದಲ ಬಾರಿಗೆ ರಾಮ್ ಚರಣ್ ಮತ್ತು ಜ್ಯೂ.ಎನ್.ಟಿ.ಆರ್ ಒಂದಾಗಿದ್ದರು. ಹಲವು ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗಿತ್ತು. ಬಾಕ್ಸ್ ಆಫೀಸಿನಲ್ಲೂ ಸಖತ್ ಸದ್ದು ಮಾಡಿತ್ತು. ಇದೀಗ ಪ್ರಶಸ್ತಿಗಳನ್ನು ಪಡೆಯುವ ಮೂಲಕ ಮತ್ತಷ್ಟು ಸದ್ದು ಮಾಡುತ್ತಿದೆ.