ನ್ಯಾಷನಲ್ ಸ್ಟಾರ್ ಯಶ್ (Yash) ನಟನೆಯ ‘ಟಾಕ್ಸಿಕ್’ (Toxic) ಸಿನಿಮಾಗೆ ಹಾಲಿವುಡ್‌ನ ಜೆಜೆ ಪೆರ್ರಿ (JJ Perry) ಆ್ಯಕ್ಷನ್ ಸೀಕ್ವೆನ್ಸ್‌ಗೆ ಡೈರೆಕ್ಷನ್ ಮಾಡಿ ತಾಯ್ನಾಡಿಗೆ ಮರಳಿದ್ದಾರೆ. ಈ ಬೆನ್ನಲ್ಲೇ, ಯಶ್ ಕುರಿತು ಜೆಜೆ ಪೆರ್ರಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ‘ಟಾಕ್ಸಿಕ್’ ಚಿತ್ರ ಅದ್ಭುತವಾಗಿದೆ ಎನ್ನುತ್ತಾ ಯಶ್ ಬಗ್ಗೆ ಗುಣಗಾನ ಮಾಡಿದ್ದಾರೆ. ಕನ್ನಡದ ಸಿನಿಮಾದಲ್ಲಿ ಕೆಲಸ ಮಾಡಿದ ಅನುಭವ ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ:ಗೋಲ್ಡನ್ ಸ್ಟಾರ್ ಗಣೇಶ್‌ಗೆ ಜೋಡಿ- ಕನ್ನಡಕ್ಕೆ ಬಂದ ‘ಹನುಮಾನ್’ ಖ್ಯಾತಿಯ ಅಮೃತಾ ಅಯ್ಯರ್
‘ಟಾಕ್ಸಿಕ್’ ಚಿತ್ರದಲ್ಲಿ ನನ್ನ ಸ್ನೇಹಿತ ಯಶ್ ಜೊತೆ ಕೆಲಸ ಮಾಡಿದ್ದು ತುಂಬಾ ಖುಷಿ ಕೊಟ್ಟಿದೆ. ಭಾರತದಲ್ಲಿ ಇದ್ದಿದ್ದು ಖುಷಿ ಕೊಟ್ಟಿತು. ಯುರೋಪ್‌ನ ನನ್ನ ಅನೇಕ ಆತ್ಮೀಯ ಸ್ನೇಹಿತರೊಂದಿಗೆ ಕೆಲಸ ಮಾಡಲು ಅವಕಾಶ ಸಿಕ್ಕಿತು. ಇದನ್ನು ನೋಡಲು ಕಾದಿದ್ದೇನೆ. ಟಾಕ್ಸಿಕ್ ಸಿನಿಮಾ ನಿಜಕ್ಕೂ ಅದ್ಭುತ. ನಾವು ಏನನ್ನು ಮಾಡಿದ್ದೇವೋ ಆ ಬಗ್ಗೆ ಹೆಮ್ಮೆ ಇದೆ ಎಂದು ಇನ್ಸ್ಟಾಗ್ರಾಂ ಖಾತೆಯಲ್ಲಿ ಯಶ್ ಜೊತೆಗಿನ ಫೋಟೋ ಶೇರ್ ಮಾಡಿ ಜೆಜೆ ಪೆರ್ರಿ ಬರೆದುಕೊಂಡಿದ್ದಾರೆ.
View this post on Instagram
ಇನ್ನೂ ‘ಟಾಕ್ಸಿಕ್’ ಚಿತ್ರವು ಕನ್ನಡ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಒಟ್ಟಿಗೆ ಶೂಟ್ ಮಾಡಲಾಗುತ್ತಿದೆ. ಈ ಸಿನಿಮಾಗೆ ಹಾಲಿವುಡ್‌ನ ಫೇಮಸ್ ಸ್ಟಂಟ್ ಮಾಸ್ಟರ್ ಜೆಜೆ ಪೆರ್ರಿ ಆ್ಯಕ್ಷನ್ ದೃಶ್ಯಗಳನ್ನು ಡೈರೆಕ್ಷನ್ ಮಾಡಿದ್ದಾರೆ. ಯಶ್ ಮತ್ತು ಕೆವಿಎನ್ ಸಂಸ್ಥೆ ಸೇರಿ ಈ ಚಿತ್ರವನ್ನು ನಿರ್ಮಾಣ ಮಾಡ್ತಿದ್ದಾರೆ.
‘ಕೆಜಿಎಫ್ 2’ ಹಿಟ್ ಆದ್ಮೇಲೆ ಯಶ್ ಗೀತು ಮೋಹನ್ ದಾಸ್ ನಿರ್ದೇಶನದ ‘ಟಾಕ್ಸಿಕ್’ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ಕಳೆದ ಆಗಸ್ಟ್‌ನಲ್ಲಿ ಸಿನಿಮಾ ಮುಹೂರ್ತ ಕಾರ್ಯಕ್ರಮ ಜರುಗಿದ್ದು, ಬೆಂಗಳೂರು ಮತ್ತು ಮುಂಬೈ ಸಿನಿಮಾದ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಚಿತ್ರದ ರಿಲೀಸ್‌ಗಾಗಿ ಫ್ಯಾನ್ಸ್ ಎದುರು ನೋಡ್ತಿದ್ದಾರೆ.