‘ಕಾಂತಾರ ಚಾಪ್ಟರ್ 1’ ಬಿಡುಗಡೆ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ: ಹೊಂಬಾಳೆ ಫಿಲಂಸ್ ಸ್ಪಷ್ಟನೆ

Public TV
2 Min Read
rishab shetty 2

ರಿಷಬ್ ಶೆಟ್ಟಿ (Rishab Shetty) ನಟನೆಯ ‘ಕಾಂತಾರ ಚಾಪ್ಟರ್ 1’ (Kantara Chapter 1) ರಿಲೀಸ್ ಬಗ್ಗೆ ಮತ್ತೊಮ್ಮೆ ಸ್ಪಷ್ಟವಾಗಿ ಹೊಂಬಾಳೆ ಫಿಲಂಸ್ ತಿಳಿಸಿದೆ. ಈ ಚಿತ್ರದ ರಿಲೀಸ್ ಬಗ್ಗೆ ಕೆಲವು ಊಹಾಪೋಹಗಳು ಹರಿದಾಡಿದ ಬೆನ್ನಲ್ಲೇ ಹೊಸ ಪೋಸ್ಟ್ವೊಂದನ್ನು ನಿರ್ಮಾಣ ಸಂಸ್ಥೆ ಹಂಚಿಕೊಂಡಿದೆ. ಅಕ್ಟೋಬರ್ 2ರಂದು ‘ಕಾಂತಾರ ಚಾಪ್ಟರ್ 1’ ರಿಲೀಸ್ ಆಗಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ನಿರ್ಮಾಣ ಸಂಸ್ಥೆ ಸ್ಪಷ್ಟನೆ ನೀಡಿದೆ. ಇದನ್ನೂ ಓದಿ:ಯೂಟ್ಯೂಬ್‌ ಸಂದರ್ಶನ ನೀಡಿ ತಗಲಾಕಿಕೊಂಡ ದಾಸ – ಕೋರ್ಟ್‌ನಿಂದ ದರ್ಶನ್‌, ವಿಜಯಲಕ್ಷ್ಮಿಗೆ ಸಮನ್ಸ್‌

rishab shettyಹೊಂಬಾಳೆ ಸಂಸ್ಥೆ ಹಂಚಿಕೊಂಡ ಪೋಸ್ಟ್‌ನಲ್ಲಿ ‘ಕಾಂತಾರ ಚಾಪ್ಟರ್ 1’ ಚಿತ್ರದ ಬಿಡುಗಡೆ ದಿನಾಂಕವನ್ನು ಅಕ್ಟೋಬರ್ 2, 2025ಕ್ಕೆ ನಿಗದಿಪಡಿಸಲಾಗಿದೆ ಎಂದು ಹೊಂಬಾಳೆ ಫಿಲಂಸ್ ಈಗಾಗಲೇ ಘೋಷಿಸಿತ್ತು. ಆದರೆ, ಇತ್ತೀಚೆಗೆ ಈ ದಿನಾಂಕದ ಬಗ್ಗೆ ಕೆಲವು ಊಹಾಪೋಹಗಳು ಹರಡಿದ್ದವು. ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿರುವ ಹೊಂಬಾಳೆ ಫಿಲಂಸ್, ಬಿಡುಗಡೆ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಅಧಿಕೃತವಾಗಿ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಅಪ್ಪಂಗೂ, ತಾತನಿಗೂ ಇಬ್ರೂ ಹೆಂಡ್ತಿರು, ನಿನ್ನ ಮದ್ವೆ ಆಗ್ತೀನಿ ಅಂತ ಕಥೆ ಕಟ್ಟಿದ್ದ- ಮನು ಕರ್ಮಕಾಂಡ ಬಿಚ್ಚಿಟ್ಟ ಸಂತ್ರಸ್ತೆ

hombale films

ಯೋಜನೆಯಂತೆ ಎಲ್ಲವೂ ಸುಸೂತ್ರವಾಗಿ ಸಾಗುತ್ತಿದೆ. ಈ ಹಿಂದಿನ `ಕಾಂತಾರ’ ಚಿತ್ರದ ಯಶಸ್ಸಿನ ನಂತರ, ‘ಕಾಂತಾರ ಚಾಪ್ಟರ್ 1’ ಸಹ ಪ್ರೇಕ್ಷಕರನ್ನು ಮತ್ತಷ್ಟು ಆಳವಾದ ಕಥೆ, ಸಂಸ್ಕೃತಿ ಮತ್ತು ದೈವಿಕ ಲೋಕಕ್ಕೆ ಕರೆದೊಯ್ಯಲಿದೆ. ನಿಮ್ಮ ಕಾತರಕ್ಕೆ ತಕ್ಕಂತೆ ಚಿತ್ರವು ಅಂದುಕೊಂಡ ದಿನಾಂಕದಂದೇ ತೆರೆಗೆ ಬರಲಿದೆ ಎಂದು ಹೊಂಬಾಳೆ ಫಿಲಂಸ್ ತಿಳಿಸಿದೆ. ಆದ್ದರಿಂದ, ಯಾವುದೇ ಅನಧಿಕೃತ ಮಾಹಿತಿಗಳಿಗೆ ಕಿವಿಗೊಡದೆ, ಅಧಿಕೃತ ಪ್ರಕಟಣೆಗಳನ್ನಷ್ಟೇ ನಂಬಲು ಚಿತ್ರತಂಡ ಮನವಿ ಮಾಡಿದೆ.

‘ಕಾಂತಾರ ಚಾಪ್ಟರ್ 1’ ಸಿನಿಮಾ ಶುರುವಾದಗಿನಿಂದ ಒಂದಲ್ಲಾ ಒಂದು ವಿಚಾರದ ಬಗ್ಗೆ ಚಿತ್ರ ಸದ್ದು ಮಾಡುತ್ತಿದೆ. ರಿಲೀಸ್ ಬಗ್ಗೆ ಮತ್ತು ಕೆಲವು ಇಲ್ಲಸಲ್ಲದ ಊಹಾಪೋಹಳು ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ನಿರ್ಮಾಣ ಸಂಸ್ಥೆ ವದಂತಿಗಳಿಗೆ ಬ್ರೇಕ್ ಹಾಕಿದೆ.

‘ಕಾಂತಾರ 2’ ಈ ಹಿಂದೆ ಸೆಪ್ಟೆಂಬರ್ 30, 2022 ರಂದು ರಿಲೀಸ್ ಆಗಿತ್ತು. ಇದರಲ್ಲಿ ರಿಷಬ್ ಶೆಟ್ಟಿ ಜೊತೆ ಸಪ್ತಮಿ ನಟಿಸಿದ್ದರು. ಈ ಚಿತ್ರ ಸೂಪರ್ ಸಕ್ಸಸ್ ಕಂಡಿತ್ತು.

Share This Article