70th National Film Awards: ‘ಕೆಜಿಎಫ್‌ 2’ ಚಿತ್ರಕ್ಕಾಗಿ ಪ್ರಶಸ್ತಿ ಸ್ವೀಕರಿಸಿದ ನಿರ್ಮಾಪಕ ವಿಜಯ್‌ ಕಿರಗಂದೂರು

Public TV
1 Min Read
vijay kiragandur

ನ್ನಡದ ಸಿನಿಮಾಗಳು ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ದೆಹಲಿಯಲ್ಲಿ ಇಂದು (ಅ.8) ರಾಷ್ಟ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿದೆ. ‘ಕೆಜಿಎಫ್‌ 2’ (KGF 2) ಸಿನಿಮಾಗಾಗಿ ನ್ಯಾಷನಲ್‌ ಅವಾರ್ಡ್‌ ಗೆದ್ದ ಹಿನ್ನೆಲೆ ನಿರ್ಮಾಪಕ ವಿಜಯ್‌ ಕಿರಗಂದೂರು ಅವರು ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ.

ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ರಾಷ್ಟ್ರ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಅತ್ಯುತ್ತಮ ಪ್ರಾದೇಶಿಕ ಸಿನಿಮಾ, ಅತ್ಯುತ್ತಮ ಸಾಹಸ ನಿರ್ದೇಶನ ವಿಭಾಗದಲ್ಲಿ ‘ಕೆಜಿಎಫ್ 2’ಗೆ ರಾಷ್ಟ್ರ ಪ್ರಶಸ್ತಿ ದಕ್ಕಿದೆ. ಈ ಚಿತ್ರ ನಿರ್ಮಿಸಿರುವ  ಹೊಂಬಾಳೆ ಸಂಸ್ಥೆಯ ರೂವಾರಿ ವಿಜಯ್ ಕಿರಗಂದೂರು ಅವರಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ. ಇನ್ನೂ ಅತ್ಯುತ್ತಮ ಮನರಂಜನಾ ಚಿತ್ರ ‘ಕಾಂತಾರ’ ಮತ್ತು ಈ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ. ಇದನ್ನೂ ಓದಿ:70th National Film Awards: ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

FotoJet 1 1

ಇನ್ನೂ ಕನ್ನಡದ ನಟಿ ನಿತ್ಯಾ ಮೆನನ್‌ಗೆ ‘ತಿರುಚಿತ್ರಂಬಲಂ’ ಸಿನಿಮಾದ ನಟನೆಗಾಗಿ ಅತ್ಯುತ್ತಮ ನಟಿ ಪ್ರಶಸ್ತಿ ನೀಡಲಾಗಿದೆ.

Share This Article