ಬೆಂಗಳೂರು: ಮತದಾರರಿಗೆ ಹಂಚಿಕೆ ಮಾಡಲು ಸಂಗ್ರಹಿಸಿದ್ದಾರೆ ಎನ್ನಲಾಗಿದ್ದ ಗೃಹೋಪಯೋಗಿ ವಸ್ತುಗಳನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ವಿಜಯನಗರದ ರಾಘವ ನಗರದಲ್ಲಿ ನಡೆದಿದೆ.
ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇಂದು ತಮ್ಮ ಅಭ್ಯರ್ಥಿಪರ ಪ್ರಚಾರದ ಕಾರ್ಯ ನಡೆಸುತ್ತಿದ್ದರು. ಈ ವೇಳೆ ಬಿಜೆಪಿಯ ಯುವ ಮೋರ್ಚಾ ಕಾರ್ಯಕರ್ತರ ಮನೆಯಲ್ಲಿ ಸಂಗ್ರಹಿಸಿದ್ದ ವಸ್ತುಗಳನ್ನು ಕಂಡು ಚುನಾವಣೆ ಅಧಿಕಾರಿಗಳಿಗೆ ಮಾಹಿತಿ ನೀಡಿದ ವೇಳೆ ಘಟನೆ ಬೆಳಕಿಗೆ ಬಂದಿದೆ.
Advertisement
Advertisement
ಚುನಾವಣೆ ಸಮಯದಲ್ಲಿ ಎಲ್ಲೆಡೆ ನೀತಿ ಸಂಹಿತೆ ಜಾರಿ ಇರುವುದರಿಂದ ಯಾವುದೇ ದಾಖಲೆ ಇಲ್ಲದೆ ಗೃಹೋಪಯೋಗಿ ವಸ್ತುಗಳನ್ನು ಸಂಗ್ರಹಿಸುವುದು ಹಾಗೂ ಸಾಗಾಣೆ ಮಾಡುವುದು ಕಾನೂನು ಉಲ್ಲಂಘಟನೆ ಎಂದು ದೂರಿರುವ ಕಾಂಗ್ರೆಸ್ ಕಾರ್ಯಕರ್ತರು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
Advertisement
ಈ ಕುರಿತು ಮಾಹಿತಿ ಪಡೆದ ಚುನಾವಣಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 2000 ಸಾವಿರ ನೀರಿನ ಗುಂಡಿ, 2000 ಗ್ಯಾಸ್ ಸ್ಟವ್, 1,500 ಕುಕ್ಕರ್, ಚಾಕುಗಳು, ತಟ್ಟೆಗಳು ಸೇರಿದಂತೆ ಗೃಹಬಳಕೆ ವಸ್ತುಗಳು ಪತ್ತೆ. ಸಂಗ್ರಹಿಸಿರುವ ವಸ್ತುಗಳ ಕುರಿತು ಮಾಹಿತಿ ಪಡೆದ ಅಧಿಕಾರಿಗಳು ಅಂಗನವಾಡಿ ಕೇಂದ್ರಗಳಿಗೆ ಪೂರೈಸಲು ಇವುಗಳನ್ನು ಸಂಗ್ರಹ ಮಾಡಲಾಗಿದೆ. ಈ ಸೂಕ್ತ ದಾಖಲೆಗಳನ್ನು ಸಲ್ಲಿಸಿದ್ದಾರೆ ಎನ್ನಲಾಗಿದೆ. ಆದರೆ ಸಂಗ್ರಹಣೆ ಮಾಡಲಾಗಿರುವ ವಸ್ತುಗಳ ಮೇಲೆ ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರವೀಂದ್ರ ಅವರ ಕ್ರಮ ಸಂಖ್ಯೆ ಇದ್ದು ಇವುಗಳು ಅವರಿಗೆ ಸೇರಿದ ವಸ್ತುಗಳು ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ.