ದರ್ಶನ್‌ಗೆ ಜೈಲೂಟ – ಮನೆಯೂಟ ಕೋರಿ ಸಲ್ಲಿಸಿದ್ದ ಅರ್ಜಿ ವಾಪಸ್‌

Public TV
1 Min Read
Darshan 9

ಬೆಂಗಳೂರು: ಮನೆಯೂಟ ಕೋರಿ ಹೈಕೋರ್ಟ್‌ನಲ್ಲಿ (High Court) ಸಲ್ಲಿಸಿದ್ದ ಅರ್ಜಿಯನ್ನು ದರ್ಶನ್‌ (Darshan) ಪರ ವಕೀಲರು ಹಿಂದಕ್ಕೆ ಪಡೆದಿದ್ದಾರೆ. ಅರ್ಜಿ ವಾಪಸ್‌ ಪಡೆದ ಕಾರಣ ದರ್ಶನ್‌ ಜೈಲೂಟವನ್ನೇ ಸೇವಿಸಬೇಕಿದೆ.

ಇಂದು ವಿಚಾರಣೆಗೆ ಬರುತ್ತಿದ್ದಂತೆ ಮೆಮೋ‌ ಸಲ್ಲಿಸಿ ಅರ್ಜಿಯನ್ನು ಹಿಂದಕ್ಕೆ ಪಡೆಯಲಾಗಿದೆ. ತಾಂತ್ರಿಕ ಕಾರಣ ನೀಡಿ ದರ್ಶನ್‌ ಪರ ವಕೀಲರು ಅರ್ಜಿಯನ್ನು ಹಿಂದಕ್ಕೆ ಪಡೆದಿದ್ದು ಮತ್ತೆ ಹೊಸ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ.

HIGH COURT

ಮನೆಯೂಟ (Home Food), ಹಾಸಿಗೆ, ಪುಸ್ತಕಗಳಿಗೆ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್‌ ಕೋರ್ಟ್ (Maagsitrate Court) ಜುಲೈ 25 ರಂದು ವಜಾಗೊಳಿಸಿತ್ತು. ಅರ್ಜಿ ವಜಾಗೊಂಡ ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ದರ್ಶನ್ ಪರ ವಕೀಲರು ಮೇಲ್ಮನವಿ ಸಲ್ಲಿಸಿದ್ದರು.

ಕಾನೂನಿಗೆ ಎಲ್ಲರೂ ಒಂದೇ, ಕೈದಿಗಳಲ್ಲಿ ಯಾವುದೇ ಭೇದವಿಲ್ಲ. ಆಸ್ತಿ ಅಂತಸ್ತು ನೋಡಿ ಜೈಲಿನಲ್ಲಿ ಸೌಕರ್ಯ ನೀಡಲು ಸಾಧ್ಯವಿಲ್ಲ. ಅಗತ್ಯವಿದ್ದಾಗ ಮಾತ್ರ ವಿಚಾರಣಾಧೀನ ಕೈದಿಗಳಿಗೆ ಮನೆಯೂಟ ನೀಡಬಹುದು. ಆದರೆ ಕೊಲೆ ಪ್ರಕರಣದ ಆರೋಪಿಗಳಿಗೆ ಇದು ಅನ್ವಯಿಸುವುದಿಲ್ಲ ಎಂದು ಹೇಳಿ ಕೋರ್ಟ್‌ ಅರ್ಜಿಯನ್ನು ವಜಾಗೊಳಿಸಿತ್ತು.

Share This Article