ಮುಂಬೈ: ಕೊರೊನಾ ಲಾಕ್‍ಡೌನ್ ವೇಳೆ ಮನೆ ಬಾಗಿಲಿಗೆ ಲಿಕ್ಕರ್ ಪೂರೈಕೆ ಮಾಡಲಾಗುತ್ತಿತ್ತು. ಆದರೀಗ ಈ ವ್ಯವಸ್ಥೆಯನ್ನು ಶೀಘ್ರದಲ್ಲಿಯೇ ನಿಲ್ಲಿಸಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ.
ಕೋವಿಡ್-19 ಪ್ರಕರಣಗಳು ಕಡಿಮೆಯಾಗಿರುವುದರಿಂದ, ನಾವು ಲಿಕ್ಕರ್‍ನನ್ನು ಮನೆ ಬಾಗಿಲಿಗೆ ಪೂರೈಸುವುದನ್ನು ನಿಲ್ಲಿಸುತ್ತೇವೆ. ಅಲ್ಲದೇ ಇನ್ಮುಂದೆ ಲಿಕ್ಕರ್ ಹೋಂ ಡೆಲಿವರಿ ಮಾಡುವುದನ್ನು ಸ್ಥಗಿತಗೊಳಿಸುವಂತೆ ಗೃಹ ಇಲಾಖೆ ಅಬಕಾರಿ ಇಲಾಖೆಗೆ ಪತ್ರ ಬರೆದಿದೆ ಎಂದು ಅಜಿತ್ ಪವಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಸತೇಂದ್ರ ಜೈನ್ ಬಳಿಕ ಮನೀಷ್ ಸಿಸೋಡಿಯ ಬಂಧನಕ್ಕೆ ತಯಾರಿ : ಮೋದಿ ವಿರುದ್ಧ ಕೇಜ್ರಿವಾಲ್ ಕಿಡಿ
ಲಾಕ್‍ಡೌನ್ ಸಮಯದಲ್ಲಿ ಮಹಾರಾಷ್ಟ್ರ ಸರ್ಕಾರವು ಮದ್ಯ ಪ್ರಿಯರಿಗೆ ಲಿಕ್ಕರ್‍ನನ್ನು ಮನೆ ಬಾಗಲಿಗೆ ಪೂರೈಕೆ ಮಾಡಬಹುದೆಂದು ಅಧಿಸೂಚನೆ ಹೊರಡಿಸಿತ್ತು. ಅಲ್ಲದೇ ಪರವಾನಗಿ ಹೊಂದಿರುವ ಮದ್ಯದಂಗಡಿಗಳಿಗೆ ಮಾತ್ರ ಮದ್ಯ ಪೂರೈಕೆ ಮಾಡಲು ಅವಕಾಶ ನೀಡಲಾಗಿತ್ತು. ಇದನ್ನೂ ಓದಿ: ಕಂದಮ್ಮನ ಎದುರೇ ಆತ್ಯಹತ್ಯೆ ಮಾಡಿಕೊಂಡ ತಾಯಿ – ಎರಡೂವರೆ ಗಂಟೆ ಅಮ್ಮ…ಎಂದು ಕಣ್ಣೀರಿಟ್ಟ ಮಗು