ಬೆಂಗಳೂರು: ಸಿಎಂ ಕಾರ್ಯಕ್ರಮದಲ್ಲಿ ಅಪಮಾನಕ್ಕೆ ಒಳಗಾಗಿದ್ದ ಧಾರವಾಡ ಎಎಸ್‌ಪಿ (Dharwad ASP) ನಾರಾಯಣ ಬರಮಣ್ಣಿ ಅವರ ಸ್ವಯಂ ನಿವೃತ್ತಿ ವಿಚಾರದಲ್ಲಿ ಸರ್ಕಾರ ಮತ್ತೊಂದು ಯಡವಟ್ಟು ನಡೆ ಪ್ರದರ್ಶಿಸಿದೆ.
ಗೃಹ ಇಲಾಖೆಯಿಂದ ಸ್ವಯಂ ನಿವೃತ್ತಿ (Voluntary Retirement) ಅಂಗೀಕಾರಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಜುಲೈ 6ಕ್ಕೆ ಡೆಡ್‌ಲೈನ್ ಫಿಕ್ಸ್ ಮಾಡಿದ್ದು, ಅಷ್ಟರೊಳಗೆ ವಿಆರ್‌ಎಸ್ ಪತ್ರ ವಾಪಸ್ ಪಡೆಯದೇ ಇದ್ದರೆ ಸ್ವಯಂ ನಿವೃತ್ತಿ ಅಂಗೀಕರಿಸುವಂತೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಸಮೀಕ್ಷೆಯನ್ನೇ ಮಾಡದೇ ಜಾತಿಗಣತಿ ಪೂರ್ಣ ಸ್ಟಿಕ್ಕರ್ ಅಂಟಿಸಿದ ಬಿಬಿಎಂಪಿ ಸಿಬ್ಬಂದಿ – ಪ್ರಶ್ನಿಸಿದ ಮನೆ ಮಾಲೀಕನ ಮೇಲೆ ಹಲ್ಲೆ
ಏನಿದು ಪ್ರಕರಣ?
ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಂದ ಅಧಿಕಾರಿ ಅಪಮಾನಕ್ಕೆ ಒಳಗಾಗಿದ್ದರು. ಬೆಳಗಾವಿ ಸಮಾರಂಭದಲ್ಲಿ ಬಿಜೆಪಿ ಕಾರ್ಯಕರ್ತರು ಏಕಾಏಕಿ ಪ್ರತಿಭಟನೆಗೆ ಮುಂದಾಗಿದ್ದರಿಂದ ಆಕ್ರೋಶಗೊಂಡ ಸಿಎಂ, ಅಧಿಕಾರಿ ಮೇಲೆ ಕಪಾಳಮೋಕ್ಷಕ್ಕೆ ಮುಂದಾಗಿದ್ದರು. ಈ ಸನ್ನಿವೇಶದಿಂದ ಅಧಿಕಾರಿ ನೊಂದುಕೊಂಡಿದ್ದರು. ಅದೇ ಕಾರಣಕ್ಕೆ ಈ ನಿರ್ಧಾರ ಕೈಗೊಂಡಿದ್ದಾರೆಯೇ ಎಂಬ ಪ್ರಶ್ನೆ ಮೂಡಿದೆ. ಇದನ್ನೂ ಓದಿ: ಈಡೇರದ ಸರ್ಕಾರದ ಭರವಸೆ | ಮತ್ತೆ ಸಾರಿಗೆ ನೌಕರರಿಂದ ಮುಷ್ಕರಕ್ಕೆ ಪ್ಲ್ಯಾನ್ – ಇಂದು ಮಹತ್ವದ ಸಭೆ
ಸ್ವಯಂಪ್ರೇರಿತ ನಿವೃತ್ತಿಗೆ ನಾರಾಯಣ ಅವರು ಅರ್ಜಿ ಸಲ್ಲಿಸಿದ್ದಾರೆ. ತಮಗಾದ ಅವಮಾನಕ್ಕೆ ಬರಮಣ್ಣಿ ಅವರು ನೊಂದುಕೊಂಡಿದ್ದರು. ಹೀಗಾಗಿ, ಕೆಲಸದಿಂದಲೇ ಸ್ವಯಂ ನಿವೃತ್ತಿಗೆ ಮುಂದಾಗಿದ್ದರು. ಅಧಿಕಾರಿಯ ನಡೆಯಿಂದ ಸರ್ಕಾರಕ್ಕೆ ಮುಜುಗರ ಆಗಿದೆ. ಹೀಗಾಗಿ ಹಿರಿಯ ಅಧಿಕಾರಿಗಳು ಸಿಎಂ ಸಮ್ಮುಖದಲ್ಲಿ ಅಧಿಕಾರಿಯ ಮನವೊಲಿಸಲು ಪ್ರಯತ್ನಿಸಿದ್ದರು ಎಂದು ತಿಳಿದುಬಂದಿತ್ತು. ಮನವೊಲಿಕೆಯಿಂದ ಅಧಿಕಾರಿ ಬರಮಣ್ಣಿ ಅವರು ಸ್ವಲ್ಪಮಟ್ಟಿಗೆ ಶಾಂತವಾಗಿದ್ದಾರೆ ಎಂದು ಹೇಳಲಾಗಿತ್ತು.
ಇದೀಗ ಜುಲೈ 6ರ ಒಳಗೆ ಸ್ವಯಂ ನಿವೃತ್ತಿಗೆ ಸಲ್ಲಿಸಿರುವ ಅರ್ಜಿ ಹಿಂಪಡೆಯದೇ ಇದ್ದರೆ, ಅಂಗೀಕರಿಸುವಂತೆ ಗೃಹ ಇಲಾಖೆ ಸೂಚನೆ ನೀಡಿರುವುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ದೆಹಲಿಯಲ್ಲಿ ಡಬಲ್ ಮರ್ಡರ್ – ಮನೆ ಕೆಲಸದವನಿಂದಲೇ ಕೃತ್ಯ