ಮೈಸೂರು: ಸುತ್ತೂರು ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ (Amitshah) ಅವರು ಚಾಮುಂಡಿ ಬೆಟ್ಟಕ್ಕೆ ತೆರಳಿದ್ದಾರೆ.
ಈ ವೇಳೆ ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಚಾಮುಂಡಿ ಬೆಟ್ಟದಿಂದ (Chamundi HIlls) ರ್ಯಾಡಿಷನ್ ಬ್ಲೂ ಹೋಟೆಲ್ ಕಡೆ ತೆರಳಿದರು.
Advertisement
Advertisement
ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಸಂದರ್ಭದಲ್ಲಿ ಅಮಿತ್ ಅಮಿತ್ ಶಾಗೆ ದೇವಾಲಯದ ವತಿಯಿಂದ ಪೂರ್ಣಕುಂಭ ಸ್ವಾಗತ ಮಾಡಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ನಾಗೇಂದ್ರ ಸೇರಿ ಸ್ಥಳೀಯ ಮುಖಂಡರೂ ಅಮಿತ್ ಶಾ ಅವರನ್ನು ಸ್ವಾಗತ ಮಾಡಿದರು. ಕಳಸ, ಮಂಗಳವಾದ್ಯದ ಮೂಲಕ ಗೃಹ ಸಚಿವರನ್ನು ಅರ್ಚಕರು ಬರಮಾಡಿಕೊಂಡರು. ಇದನ್ನೂ ಓದಿ: ಅಯೋಧ್ಯೆಯಲ್ಲಿ ಸುತ್ತೂರು ಶಾಖಾ ಮಠ ಆರಂಭಕ್ಕೆ ಚಿಂತನೆ: ಅಮಿತ್ ಶಾ
Advertisement
Advertisement
ಗೃಹ ಸಚಿವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿ.ವೈ.ವಿಜಯೇಂದ್ರ, ಸಂಸದ ಪ್ರತಾಪ್ ಸಿಂಹ, ಸಿ.ಟಿ.ರವಿ ಸಾಥ್ ನೀಡಿದರು. ಅಮಿತ್ ಶಾ ಚಾಮುಂಡಿ ಬೆಟ್ಟಕ್ಕೆ ಭೇಟಿ ಹಿನ್ನೆಲೆಯಲ್ಲಿ ದೇವಾಲಯದ ಮುಂಭಾಗ ಬ್ಯಾರಿಕೇಡ್ ಹಾಕಲಾಗಿತ್ತು. ಅಲ್ಲದೆ ಮಧಾಹ್ನ 2:15 ರಿಂದ ಸಂಜೆ 4 ಗಂಟೆ ತನಕ ಸಾರ್ವಜನಿಕ ದರ್ಶನಕ್ಕೆ ನಿಬರ್ಂಧ ಹೇರಲಾಗಿದೆ. ಸಂಜೆ 4ರ ಬಳಿಕ ಮತ್ತೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ದೇವಾಲಯದ ಸುತ್ತ ಬಿಗಿ ಪೆÇಲೀಸ್ ಭದ್ರತೆ ಒದಗಿಸಲಾಗಿತ್ತು.