ಪಶ್ಚಿಮ ಘಟ್ಟ ಪ್ರದೇಶದಲ್ಲಿ ವಾಸಿಸುವ ಜನತೆಯ ಭವಿಷ್ಯಕ್ಕೆ ಮಾರಕವಾಗುವ ಪಶ್ಚಿಮಘಟ್ಟ ಕುರಿತು, ಕೇಂದ್ರ ಪರಿಸರ ಸಚಿವಾಲಯದ ಅಧಿಸೂಚನೆ ವಿರೋಧಿಸಿ, ಮಲೆನಾಡು ಪ್ರದೇಶವನ್ನು ಪ್ರತಿನಿಧಿಸುವ ಶಾಸಕರ ಜೊತೆಗೆ ಸಭೆ ನಡೆಸಲು ಇದೇ ಜುಲೈ 18 ರಂದು ಗೃಹ ಸಚಿವ ಆರಗ ಜ್ಞಾನೇಂದ್ರರವರು ಕರೆದಿದ್ದಾರೆ.
Advertisement
ಕಳೆದ ವಾರ, ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ, ಕರ್ನಾಟಕ ರಾಜ್ಯವೂ ಒಳಗೊಂಡಂತೆ ಒಟ್ಟು 56,826 ಚದರ ಕಿಲೋ ಮೀಟರ್ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಅಧಿಸೂಚನೆ ಹೊರಡಿಸಿದ್ದು, ಆಕ್ಷೇಪಣೆ ಸಲ್ಲಿಸಲು, ಎರಡು ತಿಂಗಳು ಗಡುವು ನೀಡಲಾಗಿದೆ. ಇದನ್ನೂ ಓದಿ: ಮೂಲಸೌಕರ್ಯಕ್ಕೆ 500 ಕೋಟಿ ರೂ. ಬಿಡುಗಡೆ: ಬೊಮ್ಮಾಯಿ
Advertisement
ಒಂದು ವೇಳೆ ಈ ಅಧಿಸೂಚನೆ ಅನುಷ್ಠಾನಗೊಂಡರೆ, ಮಲೆನಾಡು ನಿವಾಸಿಗಳ ಬದುಕು ಮಸುಕಾಗುತ್ತದೆ. ಅಭಿವೃದ್ಧಿ ಕುಂಟುತ್ತದೆ ಹಾಗೂ ತೀವ್ರ ಆರ್ಥಿಕ ಹಾನಿಗೆ ತುತ್ತಾಗಬೇಕಾಗುತ್ತದೆ. ಇದನ್ನೂ ಓದಿ: ನಮ್ಮದು ಘರ್ಜಿಸುವ ಸಿಂಹ, ಕಾಂಗ್ರೆಸ್‍ನದ್ದು ಮಲಗಿದ ಸಿಂಹ: ಬೊಮ್ಮಾಯಿ
Advertisement
Advertisement
ಕರ್ನಾಟಕ ಸರ್ಕಾರ ಈ ಹಿಂದೆ ಆಡಿ ಕಸ್ತೂರಿರಂಗನ್ ಸಮಿತಿ ವರದಿಯನ್ನು ತಿರಸ್ಕರಿಸಿದೆ ಹಾಗೂ ತನ್ನ ನಿಲುವಿನ ಬಗ್ಗೆ ಸ್ಪಷ್ಟ ಅಭಿಪ್ರಾಯ ತಿಳಿಸಿದೆ. ಆ ನಿಲುವಿನಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಈ ಭಾಗದ ಶಾಸಕರ ಆಗ್ರಹವಾಗಿದೆ ಎಂದಿರುವ ಸಚಿವರು, ಸೋಮವಾರದ ಸಭೆಯಲ್ಲಿ, ಅಧಿಸೂಚನೆಯನ್ನು ವಿರೋಧಿಸಿ, ಗೊತ್ತುವಳಿಯನ್ನು ಮಂಡನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.