ಉಡುಪಿ: ಹಲವಾರು ದಿನದಿಂದ ತಲೆಮರೆಸಿಕೊಂಡು ಓಡಾಡ್ತಿದ್ದ ಸ್ಯಾಂಟ್ರೋ ರವಿ (Santro Ravi) ಬಂಧನವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಖಚಿತಪಡಿಸಿದ್ದಾರೆ. ಸ್ಯಾಂಟ್ರೋ ರವಿಯನ್ನು 11 ದಿನಗಳ ನಂತರ ಗುಜರಾತ್ನ (Gujarat) ಅಹಮದಾಬಾದ್ನಲ್ಲಿ (Ahmedabad) ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ನಾಲ್ಕೈದು ಟೀಮ್ ಮಾಡಿಕೊಂಡು ಮೈಸೂರು (Mysuru), ರಾಮನಗರ ಪೊಲೀಸರು ಕಾರ್ಯಚರಣೆ ನಡೆಸುತ್ತಿದ್ದರು. ಪೊಲೀಸರ ಸತತ ಪ್ರಯತ್ನದಿಂದ ಸ್ಯಾಂಟ್ರೋ ರವಿ ಬಂಧನವಾಗಿದೆ. ಗುಜರಾತ್ ರಾಜ್ಯದಲ್ಲಿ ಸ್ಯಾಂಟ್ರೋ ರವಿಯನ್ನು ಅರೆಸ್ಟ್ ಮಾಡಿದ್ದೇವೆ. ಎಲ್ಲಾ ಪ್ರೊಸೀಜರ್ ಮುಗಿಸಿಕೊಂಡು ಆತನನ್ನು ಬೆಂಗಳೂರಿಗೆ ಕರೆತರಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು. ಇದನ್ನೂ ಓದಿ: 15 ಸಿಮ್ ಕಾರ್ಡ್ ಬದಲಾಯಿಸಿ, ತಲೆ ಬೋಳಿಸಿದ್ದ ಸ್ಯಾಟ್ರೋ ರವಿ ಕೊನೆಗೂ ಸಿಕ್ಕಿಬಿದ್ದ
Advertisement
Advertisement
ಸರ್ಕಾರದ ಮೇಲೆ ಎಲ್ಲಾ ರೀತಿಯ ಟೀಕೆಗಳು ಕೇಳಿಬಂದಿತ್ತು. ಸರ್ಕಾರ ಮೀನಾಮೇಷ ಎಣಿಸುತ್ತಿದ್ದು, ಒತ್ತಡದಲ್ಲಿದೆ ಎನ್ನುತ್ತಿದ್ದರು. ಸರ್ಕಾರದ ಮೇಲೆ ಯಾವ ಒತ್ತಡವೂ ಇರಲಿಲ್ಲ. ನಾವು ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೆವು. ಎಲ್ಲೇ ಅಡಗಿದ್ದರೂ ಹೇಗೆ ಇದ್ದರೂ ಕರೆತಂದು ವಿಚಾರಿಸಬೇಕೆಂದು ಹೇಳಿದ್ದೆವು. ಆತ ನಡೆಸಿದ ಕೃತ್ಯಕ್ಕೆ ಸರಿಯಾದ ಶಿಕ್ಷೆಯಾಗಬೇಕು ಎಂದು ತಿಳಿಸಿದರು.
Advertisement
ಗುಜರಾತ್ನಲ್ಲಿ ನ್ಯಾಯಾಲಯಕ್ಕೆ ಆತನನ್ನು ಹಾಜರುಪಡಿಸುತ್ತಾರೆ. ನಂತರ ಆತನನ್ನು ಕರೆತರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಇಂದು ಸಂಜೆ ಅಥವಾ ನಾಳೆ ಆತನನ್ನು ಬೆಂಗಳೂರಿಗೆ ಕರೆತರುವ ಸಾಧ್ಯತೆ ಇದೆ. ಎರಡು-ಮೂರು ಕಡೆ ಅಂತಿಮ ಕ್ಷಣದಲ್ಲಿ ತಪ್ಪಿಸಿಕೊಂಡಿದ್ದ. ಎಲ್ಲಾ ಆಯಾಮದಲ್ಲೂ ತನಿಖೆ ನಡೆಯುತ್ತದೆ. ಏನೇ ಇದ್ದರೂ ಅಡಗಿಸಿಡುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಗುಜರಾತ್ನಲ್ಲಿ ಬಂಧನ
Advertisement
ಅತ್ಯಂತ ಪಾರದರ್ಶಕವಾಗಿ ತನಿಖೆ ನಡೆಯುತ್ತದೆ. ಆತ ನಡೆಸಿದ ಎಲ್ಲ ಕೃತ್ಯಕ್ಕೆ ಶಿಕ್ಷೆಯಾಗುತ್ತದೆ. ಯಾವುದೇ ಅಧಿಕಾರಿ, ರಾಜಕಾರಣಿ ಇದ್ದರೂ ಕೂಡ ತನಿಖೆಯಿಂದ ಬಯಲಿಗೆಳೆಯುತ್ತೇವೆ. ಆತನ ಜೊತೆಗೆ ಇರುವವರನ್ನು ಕೂಡ ಬಂಧಿಸಲಾಗುವುದು. ಸದ್ಯ ರವಿ ಬಂಧನವಾಗಿದೆ. ಹೆಚ್ಚಿನ ವಿವರಣೆ ನೀಡಲು ಹೋಗುವುದಿಲ್ಲ. ಪೊಲೀಸರು ಈ ಬಗ್ಗೆ ವಿವರ ನೀಡುತ್ತಾರೆ. ಗುರುವಾರ ನಾನು ಕೂಡ ಅಹಮದಾಬಾದ್ನಲ್ಲಿ ಇದ್ದದ್ದು ಕಾಕತಾಳಿಯವಷ್ಟೆ. ಬೇರೆ ಅರ್ಥ ಕಲ್ಪಿಸಬೇಕಾಗಿಲ್ಲ ಎಂದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k