– ಇವಿಎಂ ಇರೋವರೆಗೆ ಬಿಜೆಪಿಗೇ ಗೆಲುವು ಎಂದು ಸಚಿವ ಲೇವಡಿ
ಬೆಂಗಳೂರು: ಇವಿಎಂ ಹ್ಯಾಕ್‌ನಿಂದಲೇ (EVM Hack) ಮಹಾರಾಷ್ಟ್ರ ಕಳೆದುಕೊಂಡಿದ್ದೇವೆ ಅನ್ನಿಸುತ್ತಿದೆ. ಸ್ಟ್ರಾಟಜಿ ಮಾಡುವುದರಲ್ಲೂ ನಾವು ಫೇಲ್ ಆಗಿದ್ದೇವೆ ಎಂದು ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್ (G Parameshwar) ಕಳವಳ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಮಹಾರಾಷ್ಟ್ರದಲ್ಲಿ (Maharashtra) ನಾವು ಅಗಾಡಿ ಬರುತ್ತದೆ ಎಂದುಕೊಂಡಿದ್ದೆವು. ಆದರೆ ಎಲ್ಲವೂ ಉಲ್ಟಾ ಆಗಿದೆ. ಅಶೋಕ್ ಗೆಹ್ಲೋಟ್, ಭಗೇಲ್ ಸೇರಿ ಅನುಭವಿ ಸಿಎಂಗಳು ಚರ್ಚೆ ಮಾಡಿದ್ದೇವೆ. ಬಹಳಷ್ಟು ಕಡೆ ಇವಿಎಂ ಮ್ಯಾನಿಪ್ಯುಲೆಟ್ ಮಾಡಿದ್ದಾರೆ ಎಂದು ಚರ್ಚೆ ಆಗಿದೆ. ಆದ್ರೆ ಜಾರ್ಖಂಡ್‌ನಲ್ಲಿ ಯಾಕೆ ಹಾಗಾಗಲಿಲ್ಲ? ಬಿಜೆಪಿಯವರು ಪ್ಲ್ಯಾನ್ ಆಫ್ ಆಕ್ಷನ್ ತರಹ ಇದನ್ನು ಮಾಡ್ತಾರೆ ಎಂದು ಅಸಮಾಧಾನ ಹೊರಹಾಕಿದರು.
ನಂಬಿಕೆ ಬರಬೇಕು ಅಂತ ಕೆಲವು ರಾಜ್ಯಗಳಲ್ಲಿ ಇವಿಎಂ ಹ್ಯಾಕ್ ಮಾಡುವುದಿಲ್ಲ. ಇವಿಎಂ ಹ್ಯಾಕ್‌ನಿಂದಲೇ ಮಹಾರಾಷ್ಟ್ರ ಕಳೆದುಕೊಂಡಿದ್ದೇವೆ ಅನ್ನಿಸುತ್ತಿದೆ. ಸ್ಟ್ರಾಟಜಿ ಮಾಡುವುದರಲ್ಲಿ ಕೂಡ ನಾವು ಫೇಲ್ ಆಗಿದ್ದೇವೆ. ಇವಿಎಂ ಇರುವ ತನಕ ಅವರೇ ಗೆಲ್ಲುತ್ತಾರೆ ಅನ್ನಿಸುತ್ತದೆ. ಬ್ಯಾಲೆಟ್ ಪೇಪರ್ ಬರಬೇಕು ಅಂತ ನಾವು ಮೊದಲಿನಿಂದಲೂ ಒತ್ತಾಯ ಮಾಡುತ್ತಿದ್ದೇವೆ ಎಂದು ಹೇಳಿದರು.
ಲಾಡ್ಲಿ ಬೆಹಿನ್ ಯೋಜನೆ ಇಂಪ್ಯಾಕ್ಟ್:
ಬಹಳಷ್ಟು ಕಡೆ ಇವಿಎಂ ಮ್ಯಾನಿಪ್ಯುಲೆಟ್ ಮಾಡಿದ್ರು ಅಂತ ಚರ್ಚೆ ಅಯ್ತು, ಜಾರ್ಖಂಡ್‌ನಲ್ಲಿ ಯಾಕೆ ಮಾಡಿಲ್ಲ ಅಂದ್ರೆ ಕೆಲವು ಕಡೆ ಬಿಟ್ಟು ಬಿಡ್ತಾರೆ. ರಾಜ್ಯದಲ್ಲಿ ಕೆಲವು ಗೆದ್ದೆ ಗೆಲ್ತಿವಿ ಅನ್ನೋ ಕಡೆ ಬಿಡ್ತಾರೆ. ಇದರೊಂದಿಗೆ ಲಾಡ್ಲಿ ಬೆಹಿನ್ ಯೋಜನೆ ಸಾಕಷ್ಟು ಇಂಪ್ಯಾಕ್ಟ್ ಅಗಿದೆ. ಅವರು 6 ತಿಂಗಳು ಮೊದಲು ಕೊಟ್ಟರು, ಇದೆಲ್ಲವೂ ಅವರ ಕೈ ಹಿಡಿದಿದೆ. ನಾವು ಕೊನೆಗೆ ಟಿಕೆಟ್ ಘೋಷಣೆ ಮಾಡಿದ್ವು, ಪಕ್ಷದಲ್ಲೂ ಗೊಂದಲ ಆಯ್ತು. ಶರದ್ ಪವಾರ್ ಗುಂಪು, ಉದ್ದವ್ ಠಾಕ್ರೆ ಗುಂಪಿನ ನಡುವೆ ಸರಿಯಾಗಿ ಹೊಂದಾಣಿಕೆ ಆಗಿಲ್ಲ. ವಿದರ್ಭದಲ್ಲಿ ಹೆಚ್ಚು ಸೀಟ್ ಬರಲಿಲ್ಲ. ಎಲ್ಲಿಯವರೆಗೆ ಇವಿಎಂ ಇರುತ್ತೆ ಅಲ್ಲಿಯವರೆಗೆ ಕಾಂಗ್ರೆಸ್ ಬರೋದು ಕಷ್ಟ ಆಗುತ್ತೆ ಎಂದು ನುಡಿದರು.
ಇವಿಎಂ ಇರೋವರೆಗೆ ಬಿಜೆಪಿಗೇ ಗೆಲುವು:
ಇವಿಎಂ ಇರೋವರೆಗೆ ಬಿಜೆಪಿನೇ ಗೆಲ್ಲುತ್ತಿರುತ್ತೆ. ಒಂದೊಂದು ರಾಜ್ಯ ಬಿಟ್ಟು ಬಿಡ್ತಾರೆ. ನಮ್ಮ ರಾಜ್ಯದಲ್ಲಿ ಯಡಿಯೂರಪ್ಪ ಬಳಿಕ ದೊಡ್ಡ ನಾಯಕತ್ವ ಇರಲಿಲ್ಲ. ಅದಕ್ಕೆ ಬಿಟ್ಟರು, ಹ್ಯಾಕ್ ಮಾಡೋದ್ರಲ್ಲಿ ಬಿಜೆಪಿಗರು ನಿಪುಣರು, ಜಾರ್ಖಂಡನಲ್ಲಿ ಜೆಎಂಎಂ ಬರುತ್ತೆ ಅಂತ ಬಿಟ್ಟರು. ಕಾಂಗ್ರೆಸ್ ಬರುತ್ತೆ ಅಂತಿದ್ರೆ ಅಲ್ಲೂ ಮಾಡ್ತಿದ್ರು. ಇವಿಎಂ ಬೇಡ ಅಂತ ನಾವು ಸುಪ್ರೀಂ ಕೋರ್ಟ್ ಹೋದರೂ ಆಗಲಿಲ್ಲ. ಅವರು ಸಹ ಎಲೆಕ್ಷನ್ ಕಮೀಷನ್ ಹೇಳಿದ್ದನ್ನ ಒಪ್ಪಿಕೊಂಡರು ಎಂದು ಲೇವಡಿ ಮಾಡಿದರು.