ಬೆಂಗಳೂರು: ಸೂರಜ್ ರೇವಣ್ಣ ವಿರುದ್ಧ ಆರೋಪ ಸಂಬಂಧ (Suraj Revanna) ಇನ್ನೂ ಯಾವುದೇ ದೂರು ಬಂದಿಲ್ಲ. ದೂರು ಬಂದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರಕರಣದ ಬೆಳವಣಿಗೆ ನೋಡಿ ಸಿಐಡಿಗೆ ವಹಿಸುವ ಕೆಲಸ ಮಾಡ್ತೇವೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ (G Parameshwara) ಹೇಳಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದಲ್ಲಿಂದು ಗೃಹ ಸಚಿವ ಪರಮೇಶ್ವರ್ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್ ಅವರನ್ನ ಭೇಟಿಯಾದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೂರಜ್ ರೇವಣ್ಣ ವಿರುದ್ಧ ಆರೋಪ ಇನ್ನೂ ಯಾವುದೇ ದೂರು ಬಂದಿಲ್ಲ. ದೂರು ಬಂದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ದರ್ಶನ್ ಜೊತೆ ಬಂಧನವಾಗಿರೋ ಆರೋಪಿಗಳ ಕುಟುಂಬದ ಸ್ಥಿತಿ ಶೋಚನೀಯ!
Advertisement
Advertisement
ನನಗೆ ಯಾವುದೇ ಪತ್ರ ಬಂದಿಲ್ಲ, ದೂರು ಕೂಡ ಬಂದಿಲ್ಲ. ಸೂರಜ್ ರೇವಣ್ಣ ಆಗಲಿ, ಆ ದೂರುದಾರ ಆಗಲಿ ಎಲ್ಲಿಯೂ ದೂರು ಕೊಟ್ಟಿಲ್ಲ. ಯಾವುದೇ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿಲ್ಲ. ಸೂರಜ್ ರೇವಣ್ಣ ಪರ ಶಿವಕುಮಾರ್ ಎಂಬುವವರು ದೂರು ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ – ಸಂತ್ರಸ್ತನ ವಿರುದ್ಧವೇ ಕೇಸ್ ದಾಖಲು
Advertisement
Advertisement
ಪತ್ರ ಬರೆದ ಮಾತ್ರಕ್ಕೆ ಆಗಲ್ಲ:
ಇನ್ನೂ ಈ ಸೂರಜ್ ಪ್ರಕರಣವನ್ನು ಸಿಐಡಿಗೆ ಕೊಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಮೊದಲು ದೂರು ಕೊಡಬೇಕು. ಪತ್ತ ಬರೆದ ತಕ್ಷಣ ಆಗಲ್ಲ. ಅವರು ಪತ್ರ ಬರೆದಿದ್ದೇವೆ ಅಂತಾರೆ, ನನಗೆ ಯಾವುದೇ ಪತ್ರ ಬಂದಿಲ್ಲ. ಪ್ರಕರಣ ಏನಾಗುತ್ತೆ ಅಂತಾ ಕಾದು ನೋಡೋಣ, ಅಧಿಕೃತ ದೂರು ಬಂದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಸಿಐಡಿಗೆ ಕೊಡುವ ನಿರ್ಧಾರ ಮಾಡ್ತೇವೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ದಲಿತ ಉದ್ಯಮಿಗಳ ಸಮಸ್ಯೆ ಇತ್ಯರ್ಥಕ್ಕೆ ಉನ್ನತ ಮಟ್ಟದ ಸಮಿತಿ ರಚನೆ : ಎಂ ಬಿ ಪಾಟೀಲ್