ಬೆಂಗಳೂರು: ಹೈಕಮಾಂಡ್‌ನವರು (High Command) ಹೇಳಿದ್ರೆ ಮಾತ್ರ ಜನವರಿ 22ರ ನಂತರವೂ ರಾಮ ಮಂದಿರಕ್ಕೆ (Ram Mandir) ಹೋಗುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್ (Parameshwar) ಸ್ಪಷ್ಟಪಡಿಸಿದ್ದಾರೆ.
ಜನವರಿ 22 ನಂತರ ರಾಮ ಮಂದಿರಕ್ಕೆ ಹೋಗುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ (Siddaramaiah) ಅವರ ಹೇಳಿಕೆ ಬಗ್ಗೆ ನನಗೇನು ಗೊತ್ತಿಲ್ಲ. ಸರ್ಕಾರದ ಹಂತದಲ್ಲಿ ಈ ಬಗ್ಗೆ ಚರ್ಚೆ ನಡೆದಿಲ್ಲ. ಹೈಕಮಾಂಡ್ ಈಗಾಗಲೇ ರಾಮಮಂದಿರ ಕಾರ್ಯಕ್ರಮಕ್ಕೆ ಹೋಗಬಾರದು ಎಂಬ ನಿಲುವು ತೆಗೆದುಕೊಂಡಿದೆ. ಒಂದು ವೇಳೆ ಜನವರಿ 22 ನಂತರ ಹೋಗುವ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಿದರೆ ನಾವು ಹೋಗುತ್ತೇವೆ ಎಂದರು. ಇದನ್ನೂ ಓದಿ: ರಾಮ ಪ್ರತಿಷ್ಠಾಪನೆ ವೀಕ್ಷಣೆಗೆ ಮಾರಿಷಸ್ ಉದ್ಯೋಗಿಗಳಿಗೆ 2 ಗಂಟೆ ವಿಶೇಷ ಬ್ರೇಕ್
ಎಲ್ಲವನ್ನೂ ನಮ್ಮ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದೇವೆ. ನಮ್ಮದು ರಾಷ್ಟ್ರೀಯ ಪಕ್ಷ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತಾರೋ ಅದರಂತೆ ನಡೆಯಬೇಕು. ಅವರು ಹೋಗುವುದು ಬೇಡ ಎಂದು ಹೇಳಿದಾಗ ನಾವು ಅದರ ವಿರುದ್ದ ನಿಲುವು ತೆಗೆದುಕೊಳ್ಳಲು ಆಗುವುದಿಲ್ಲ. ಹೈಕಮಾಂಡ್ ಹೇಳಿದರೆ ಮಾತ್ರ ಹೋಗುತ್ತೇವೆ ಎಂದರು. ಇದನ್ನೂ ಓದಿ: Ayodhya Ram Mandir: ಕಾಶಿ ಯಜ್ಞಶಾಲೆಯಲ್ಲಿ 40 ದಿನ ವಿಶೇಷ ಪೂಜೆ – ಶಂಕರಾಚಾರ್ಯ ವಿಜಯೇಂದ್ರ ಸರಸ್ವತಿ