ಬೆಂಗಳೂರು: ಅಂದ್ರಹಳ್ಳಿಯ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಪ್ರಕರಣ ತನಿಖೆ ಆಗಬೇಕು ಅಂತಾ ಗೃಹ ಸಚಿವ ಪರಮೇಶ್ವರ್ (G Parameshwar) ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಂದ್ರಹಳ್ಳಿ ಪ್ರಕರಣದ ಬಗ್ಗೆ ಶಿಕ್ಷಣ ಸಚಿವರ (Education Minister) ಗಮನಕ್ಕೆ ತರುತ್ತೇನೆ. ಖಂಡಿತವಾಗಿ ಈ ರೀತಿ ನಡೆಯಬಾರದು ಅಂತಾ ಖಂಡಿಸಿದ್ರು.
Advertisement
Advertisement
ಶಾಲೆಗಳಲ್ಲಿ ಈ ರೀತಿ ಘಟನೆ ನಡೆಯಬಾರದು, ಮಕ್ಕಳನ್ನ ಈ ರೀತಿಯ ಕೆಲಸಗಳಿಗೆ ಬಳಸಿಕೊಳ್ಳಬಾರದು. ಶಿಕ್ಷಣ ಇಲಾಖೆ ಜನರಲ್ ಆಗಿ ಸುತ್ತೋಲೆ ಹೊರಡಿಸಬೇಕು ಅಂತಾ ಸಲಹೆ ಕೊಟ್ಟರು. ಅಲ್ಲದೆ ಯಾವ ಉಪಾಧ್ಯಾಯರು ಮಕ್ಕಳ ಬಳಿ ಈ ಕೆಲಸ ಮಾಡಿಸಿದ್ದಾರೆ ಅವರ ಮೇಲೆ ಕ್ರಮ ಕೈಗೊಳ್ಳಲು ನಾನು ಸೂಚಿಸುತ್ತೇನೆ ಅಂತೇಳಿದ್ರು. ಇದನ್ನೂ ಓದಿ: INDIA ಒಕ್ಕೂಟದಲ್ಲಿ ಭಿನ್ನಮತ – ಖರ್ಗೆ, ಫರ್ಗೆ ಅಂದರೆ ಯಾರು ಎಂದ ಜೆಡಿಯು ಶಾಸಕ
Advertisement
Advertisement
ನಡೆದಿದ್ದೇನು..?: ಕೋಲಾರ ಜಿಲ್ಲೆಯಲ್ಲಿ ಶೌಚಗುಂಡಿಗೆ ಮಕ್ಕಳನ್ನ ಇಳಿಸಿದ ಪ್ರಕರಣ ಮಾಸುವ ಬೆನ್ನೆಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿತ್ತು. ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆಯಲ್ಲಿ ಮತ್ತೊಂದು ಘಟನೆ ನಡೆದಿದೆ. ಯಶವಂತಪುರ ವಿಧಾನಸಭಾ ಕ್ಷೇತ್ರದ ಅಂದ್ರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕೈಯಿಂದ ಟಾಯ್ಲೆಟ್ ಕ್ಲೀನಿಂಗ್ (Toilet Clean) ಮಾಡಿಸಿದ್ದರು. 6 ನೇ ತರಗತಿ ವಿದ್ಯಾರ್ಥಿಗಳು ಆಸಿಡ್ ಹಾಕಿ ಶೌಚಾಲಯ ಕ್ಲೀನ್ ಮಾಡಿದ್ದರು. ಈ ವಿಚಾರ ಪೋಷಕರಿಗೆ ಗೊತ್ತಾಗಿ ಅವರು ಶಾಲೆಯ ಮುಂದೆ ಪ್ರತಿಭಟನೆ ನಡೆಸಿದ್ದರು.
ಮುಖ್ಯ ಶಿಕ್ಷಕಿ ಅಮಾನತು: ಸದ್ಯ ಪ್ರಕರಣ ಸಂಬಂಧ ಶಾಲೆಯ ಹಿರಿಯ ಮುಖ್ಯ ಶಿಕ್ಷಕಿ ಲಕ್ಷ್ಮಿದೇವಮ್ಮ ಅವರನ್ನ ಶಿಕ್ಷಣ ಇಲಾಖೆ ಅಮಾನತು ಮಾಡಿದೆ. ಬಿಇಓ ವರದಿ ಆಧರಿಸಿ ಪ್ರಕರಣದಲ್ಲಿ ಶಿಕ್ಷಕಿ ಲಕ್ಷ್ಮಿದೇವಮ್ಮ ಅವರ ತಪ್ಪು ಕಂಡು ಬಂದ ಹಿನ್ನಲೆಯಲ್ಲಿ ಬೆಂಗಳೂರು ಉತ್ತರ ಜಿಲ್ಲೆ ಡಿಡಿಪಿಐ ಲೋಕೇಶ್ವರ ರೆಡ್ಡಿ ಅಮಾನತು ಮಾಡಿ ಅದೇಶ ಹೊರಡಿಸಿದ್ದಾರೆ. ಇಲಾಖೆ ವಿಚಾರಣೆಗೆ ಆದೇಶ ಮಾಡಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಶಿಕ್ಷಕಿ ಲಕ್ಷ್ಮಿದೇವಮ್ಮ ಅವರನ್ನ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.