ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra Escort Vehicle) ಅವರ ಬೆಂಗಾವಲು ವಾಹನ ಯಾವುದೇ ಅಪಘಾತಕ್ಕೆ ಕಾರಣವಾಗಿರುವುದಿಲ್ಲ ಎಂದು ಆರಗ ಜ್ಞಾನೇಂದ್ರ ಅವರ ಕಚೇರಿಯಿಂದ ಸ್ಪಷ್ಟನೆ ನೀಡಲಾಗಿದೆ.
ಸ್ಪಷ್ಟನೆ ಏನು..?: ಗೃಹ ಸಚಿವರ ಬೆಂಗಾವಲು ವಾಹನವು ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದು ನಿಧನಕ್ಕೆ ಕಾರಣವಾಗಿದೆ ಎಂಬ ವರದಿಗಳು ಸತ್ಯಕ್ಕೆ ದೂರವಾಗಿದ್ದಾಗಿದೆ. ಗೃಹ ಸಚಿವರು ಪ್ರಯಾಣಿಸುತ್ತಿದ್ದ ಹಾಗೂ ಅವರ ಬೆಂಗಾವಲು ವಾಹನಗಳು ಯಾವುದೇ ಅಪಘಾತಕ್ಕೆ ಕಾರಣವಾಗಿರುವುದಿಲ್ಲ.
ಗೃಹ ಸಚಿವರ ಪ್ರವಾಸದ ವೇಳೆಯಲ್ಲಿ ಹಾಸನ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸುತ್ತಿದ್ದಾಗ ಜಿಲ್ಲಾ ಪೊಲೀಸ್ ವಾಹನವೊಂದು ಬೆಂಗಾವಲು ವಾಹನದ ಬಹಳ ಹಿಂದಕ್ಕೆ ಬರುವಾಗ ವ್ಯಕ್ತಿಗೆ ಡಿಕ್ಕಿ ಹೊಡೆದಿತ್ತು ಎಂದು ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ತಿಳಿಸಿದ್ದಾರೆ. ಇದನ್ನೂ ಓದಿ: ಗೃಹ ಸಚಿವರ ಎಸ್ಕಾರ್ಟ್ ವಾಹನಕ್ಕೆ ಬೈಕ್ ಸವಾರ ಸಾವು- ಆರಗ ವಿರುದ್ಧ ಜನಾಕ್ರೋಶ
ಇದೊಂದು ಸಚಿವರ ಗಮನಕ್ಕೆ ಬಾರದೆ ಹೋದ ದುರದೃಷ್ಟಕರ ಘಟನೆಯಾಗಿದೆ. ಡಿಕ್ಕಿ ಹೊಡೆದು ಅವಘಡ ನಡೆದರೂ ಸಚಿವರು ಲೆಕ್ಕಿಸದೆ ಹೋದರು ಎಂಬ ವರದಿಗಳು ಸತ್ಯಕ್ಕೆ ದೂರವಾದುದಾಗಿದೆ ಎಂದು ಆರಗ ಜ್ಞಾನೇಂದ್ರ ಅವರ ಕಚೇರಿಯಿಂದ ಸ್ಪಷ್ಟನೆ ನೀಡಲಾಗಿದೆ.