ಬೆಂಗಳೂರು: ಪಿಎಸ್‍ಐ ಅಕ್ರಮ ನೇಮಕಾತಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನೇರ ಪಾತ್ರವಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
Advertisement
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಗೃಹ ಸಚಿವ ಆರಗ ಜ್ಞಾನೇಂದ್ರ 545 ಪಿಎಸ್‍ಐ ನೇಮಕಾತಿಯಲ್ಲಿ ಅಕ್ರಮವೇ ನಡೆದಿಲ್ಲ ಎಂದಿದ್ದರು. ಈಗ ಸರ್ಕಾರ ಇಡೀ ನೇಮಕಾತಿ ಪ್ರಕ್ರಿಯೆಯನ್ನೇ ರದ್ದು ಪಡಿಸಿ ಮರು ಪರೀಕ್ಷೆಗೆ ಮುಂದಾಗಿದೆ. ಸರ್ಕಾರ ಮರು ಪರೀಕ್ಷೆಗೆ ಮುಂದಾಗಿರುವುದು ಡ್ಯಾಮೇಜ್ ಕಂಟ್ರೋಲರ್ ತಂತ್ರವಷ್ಟೆ. ಆದರೆ ಗೃಹ ಸಚಿವರ ಪಾತ್ರವಿಲ್ಲದೇ ಪಿಎಸ್‍ಐ ಅಕ್ರಮ ನೇಮಕಾತಿ ನಡೆಯಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಪರೀಕ್ಷೆಗೆ ಹಿಜಬ್ ಧರಿಸಿ ಬಂದ ಡಿಗ್ರಿ ವಿದ್ಯಾರ್ಥಿನಿಗೆ ಅನುಮತಿ ನಿರಾಕರಣೆ
Advertisement
1
ಗೃಹ ಸಚಿವ @JnanendraAraga 545 PSI ನೇಮಕಾತಿಯಲ್ಲಿ ಅಕ್ರಮವೇ ನಡೆದಿಲ್ಲ ಎಂದಿದ್ದರು.
ಈಗ ಸರ್ಕಾರ ಇಡೀ ನೇಮಕಾತಿ ಪ್ರಕ್ರಿಯೆಯನ್ನೇ ರದ್ದು ಪಡಿಸಿ ಮರು ಪರೀಕ್ಷೆಗೆ ಮುಂದಾಗಿದೆ.
ಸರ್ಕಾರ ಮರು ಪರೀಕ್ಷೆಗೆ ಮುಂದಾಗಿರುವುದು ಡ್ಯಾಮೇಜ್ ಕಂಟ್ರೋಲರ್ ತಂತ್ರವಷ್ಟೆ.
ಆದರೆ ಗೃಹ ಸಚಿವರ ಪಾತ್ರವಿಲ್ಲದೆ #PSISCAM ನಡೆಯಲು ಸಾಧ್ಯವೇ?
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 30, 2022
Advertisement
ಪಿಎಸ್‍ಐ ಅಕ್ರಮ ನೇಮಕಾತಿಯಲ್ಲಿ ಗೃಹ ಸಚಿವರ ನೇರ ಪಾತ್ರವಿದೆ. ಪ್ರಕರಣದ ಕಿಂಗ್ಪಿನ್ ಬಂಧಿತೆ ದಿವ್ಯಾ ಹಾಗರಗಿ ಮನೆಗೆ ಜ್ಞಾನೇಂದ್ರರವರು ಡೀಲಿಂಗ್ ಮಾಡಲು ಹೋಗಿದ್ದು ಸತ್ಯವಲ್ಲವೆ? ಪ್ರಕರಣದ ಬಗ್ಗೆ ಮಾಹಿತಿ ಕೊಡುವವರಿಗೆ ನೋಟಿಸ್ ಕೊಡುವ ಸಿಐಡಿ ಜ್ಞಾನೇಂದ್ರರ ವಿಚಾರಣೆಯನ್ನು ಇನ್ನೂ ಯಾಕೆ ನಡೆಸಿಲ್ಲ? ಸಿಐಡಿ ಯಾರನ್ನು ರಕ್ಷಿಸುತ್ತಿದೆ ಎಂದು ಪ್ರಶ್ನಿಸುವ ಮೂಲಕ ಕಿಡಿಕಾರಿದ್ದಾರೆ. ಇದನ್ನೂ ಓದಿ: ಊಟ ನಿರಾಕರಣೆ, ಎಸಿ ಇಲ್ದೆ ನಿದ್ರೆ ಇಲ್ಲ – PSI ಅಕ್ರಮದಲ್ಲಿ ಅರೆಸ್ಟ್ ಆದ ದಿವ್ಯಾ ಹಾಗರಗಿ ಹೈಡ್ರಾಮಾ
Advertisement
2
PSI ಅಕ್ರಮ ನೇಮಕಾತಿಯಲ್ಲಿ ಗೃಹ ಸಚಿವರ ನೇರ ಪಾತ್ರವಿದೆ.
ಪ್ರಕರಣದ ಕಿಂಗ್ಪಿನ್ ಬಂಧಿತೆ ದಿವ್ಯಾ ಹಾಗರಗಿ ಮನೆಗೆ ಜ್ಞಾನೇಂದ್ರರವರು ಡೀಲಿಂಗ್ ಮಾಡಲು ಹೋಗಿದ್ದು ಸತ್ಯವಲ್ಲವೆ?
ಪ್ರಕರಣದ ಬಗ್ಗೆ ಮಾಹಿತಿ ಕೊಡುವವರಿಗೆ ನೋಟಿಸ್ ಕೊಡುವ CID ಜ್ಞಾನೇಂದ್ರರ ವಿಚಾರಣೆಯನ್ನು ಇನ್ನೂ ಯಾಕೆ ನಡೆಸಿಲ್ಲ? CID ಯಾರನ್ನು ರಕ್ಷಿಸುತ್ತಿದೆ?
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 30, 2022
ಪಿಎಸ್‍ಐ ನೇಮಕಾತಿ ಪರೀಕ್ಷೆಯ ಅಕ್ರಮಕ್ಕೆ ಸಾಥ್ ನೀಡಿರುವ ಆರೋಪದಡಿ ಬಿಜೆಪಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ದಿವ್ಯಾ ಹಾಗರಗಿಯನ್ನು ಶುಕ್ರವಾರ ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಸದ್ಯ 11 ದಿನಗಳ ಕಾಲ ದಿವ್ಯಾ ಹಾಗರಗಿಯನ್ನು ನ್ಯಾಯಾಲಯ ಸಿಐಡಿ ಕಸ್ಟಡಿಗೆ ನೀಡಿದೆ.