ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು (CAA) ಕೇಂದ್ರ ಸರ್ಕಾರ ಅಧಿಕೃತವಾಗಿ ಜಾರಿಗೊಳಿಸಲು ಮುಂದಾಗಿದೆ. ಇಂದು ರಾತ್ರಿಯೇ ಕೇಂದ್ರ ಗೃಹ ಸಚಿವಾಲಯ ಸಿಎಎ ಜಾರಿ ಸಂಬಂಧ ನಿಯಮಗಳನ್ನು ಪ್ರಕಟಿಸಿ ಅಧಿಸೂಚನೆ ಹೊರಡಿಸುವ ಸಾಧ್ಯತೆಯಿದೆ.
ಈ ಹಿಂದಿನ ಚುನಾವಣೆಯ ಸಂದರ್ಭದಲ್ಲಿ ಸಿಎಎ ಜಾರಿಗೊಳಿಸುತ್ತೇವೆ ಎಂದು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಪ್ರಕಟಿಸಿತ್ತು. ರಾಷ್ಟ್ರ ಪತಿಗಳು ಕಾಯ್ದೆಗೆ ಸಹಿ ಹಾಕಿದ್ದರೂ ಇಲ್ಲಿಯವರೆಗೆ ಜಾರಿ ಆಗಿರಲಿಲ್ಲ. ಈಗ ಲೋಕಸಭಾ ಚುನಾವಣೆಗೂ ಮುನ್ನ ಸಿಎಎ ಜಾರಿಗೊಳಿಸುವ ಮೂಲಕ ತನ್ನಲ್ಲಿದ್ದ ದೊಡ್ಡ ಅಸ್ತ್ರವನ್ನು ಬಿಜೆಪಿ ಪ್ರಯೋಗಿಸಿದೆ. ಇದನ್ನೂ ಓದಿ: ಬಸ್ ಮೇಲೆ ಬಿದ್ದ 11,000 ವೋಲ್ಟ್ ಕರೆಂಟ್ ವೈರ್ – 10ಕ್ಕೂ ಹೆಚ್ಚು ಮಂದಿ ಸಜೀವ ದಹನ
Advertisement
Advertisement
ಈ ಹಿಂದೆ ಖಾಸಗಿ ಮಾಧ್ಯಮವೊಂದರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಗೃಹ ಸಚಿವ ಅಮಿತ್ ಶಾ (Amit Shah) ಲೋಕಸಭಾ ಚುನಾವಣೆಗೆ (Lok Sabha Election) ಮುನ್ನ ಜಾರಿಗೆ ತರುವುದಾಗಿ ಹೇಳಿದ್ದರು.
Advertisement
ಸಿಎಎ ದೇಶದ ಕಾಯ್ದೆಯಾಗಿದೆ. ಅದನ್ನು ಖಂಡಿತವಾಗಿಯೂ ಲೋಕಸಭಾ ಚುನಾವಣೆಗೆ ಮುನ್ನವೇ ನೋಟಿಫೈ ಮಾಡಲಾಗುವುದು ಅದರಲ್ಲಿ ಯಾವುದೇ ಗೊಂದಲ ಇಲ್ಲ. ಸಿಎಎ ಕಾಂಗ್ರೆಸ್ ಸರ್ಕಾರದ (Congress Government) ಭರವಸೆಯಾಗಿತ್ತು. ದೇಶ ವಿಭಜನೆಯಾದಾಗ ಮತ್ತು ಆ ದೇಶದಲ್ಲಿದ್ದ ಅಲ್ಪಸಂಖ್ಯಾತರು ಕಿರುಕುಳಕ್ಕೊಳಗಾದಾಗ, ನಿರಾಶ್ರಿತರಿಗೆ ಭಾರತದಲ್ಲಿ ಆಶ್ರಯ ನೀಡಿ ಭಾರತೀಯ ಪೌರತ್ವವನ್ನು ನೀಡಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿತ್ತು. ಈಗ ಕಾಂಗ್ರೆಸ್ ಆ ಭರವಸೆಯಿಂದ ಹಿಂದಕ್ಕೆ ಸರಿಯುತ್ತಿದೆ ಎಂದು ಶಾ ದೂರಿದ್ದರು. ಇದನ್ನೂ ಓದಿ: ಡಿಕೆಸು Vs ಡಾ.ಮಂಜುನಾಥ್ ಸ್ಪರ್ಧೆ ಫಿಕ್ಸ್, ಅಧಿಕೃತ ಘೋಷಣೆ ಮಾತ್ರ ಬಾಕಿ – ಜೆಡಿಎಸ್ ಸಭೆಯಲ್ಲಿ ಏನು ಚರ್ಚೆ ನಡೆದಿದೆ?
Advertisement
ನಮ್ಮ ದೇಶದಲ್ಲಿ ಅಲ್ಪಸಂಖ್ಯಾತರು ಮತ್ತು ವಿಶೇಷವಾಗಿ ನಮ್ಮ ಮುಸ್ಲಿಂ ಸಮುದಾಯವನ್ನು ಪ್ರಚೋದಿಸಲಾಗುತ್ತಿದೆ. ಕಾಯ್ದೆಯಲ್ಲಿ ಯಾವುದೇ ನಿಬಂಧನೆ ಇಲ್ಲದ ಕಾರಣ ಸಿಎಎ ಯಾರ ಪೌರತ್ವವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಸಿಎಎ ಬಾಂಗ್ಲಾದೇಶ ಮತ್ತು ಪಾಕಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ನಿರಾಶ್ರಿತರಿಗೆ ಪೌರತ್ವ ನೀಡುವ ಕಾಯ್ದೆಯಾಗಿದೆ ಎಂದು ವಿವರಿಸಿದ್ದರು.
2019ರಲ್ಲಿ ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಗಳು ಸಹಿ ಹಾಕಿದ ನಂತರ ದೇಶದಲ್ಲಿ ಭಾರೀ ಪ್ರತಿಭಟನೆ ನಡೆದ ಕಾರಣ ಇನ್ನೂ ಸಿಎಎ ಜಾರಿಯಾಗಿಲ್ಲ. ಈ ಕಾಯ್ದೆಯ ಪ್ರಕಾರ ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶಗಳಿಂದ ಬರುವ ಹಿಂದೂ, ಸಿಖ್, ಜೈನ್, ಕ್ರೈಸ್ತ ಮತ್ತು ಬೌದ್ಧ ಸಮುದಾಯದವರಿಗೆ ಭಾರತದ ಪೌರತ್ವ ನೀಡಲಾಗುತ್ತದೆ.