ಹೆಚ್ಚಿನವರಿಗೆ ಬಾಯಿ ದುರ್ವಾಸನೆ ಸಮಸ್ಯೆ ಕಾಡುತ್ತದೆ. ಬಾಯಿ ದುರ್ನಾತದಿಂದ ಜನರೊಂದಿಗೆ ಬೆರೆಯಲು ನಮಗೆ ಮುಜುಗರವಾಗುತ್ತದೆ. ಇಂತಹ ಸಮಸ್ಯೆ ಹೆಚ್ಚಿನವರನ್ನು ಕಾಡುತ್ತದೆ. ನಿಮ್ಮ ಮನೆಯಲ್ಲಿಯೇ ದೊರೆಯುವ ಅನೇಕ ಪದಾರ್ಥಗಳಿಂದ ನಿಮ್ಮ ಬಾಯಿಯ ದುರ್ವಾಸನೆಯನ್ನು ನೈಸರ್ಗಿಕವಾಗಿ ತೊಲಗಿಸಬಹುದು.
* ಲವಂಗ ಬಾಯಿಯ ದುರ್ವಾಸನೆಯನ್ನು ತೊಡೆದು ಹಾಕಲು ಸಹಾಯ ಮಾಡುತ್ತದೆ. ಆಗಾಗ್ಗೆ 3 ರಿಂದ 4 ಲವಂಗವನ್ನು ನಿಧಾನವಾಗಿ ಜಗಿಯಿರಿ.ನಿಮ್ಮ ಬಾಯಿಯ ದುರ್ವಾಸನೆ, ಹಲ್ಲು ನೋವು ಹಾಗೂ ಬಾಯಿಯಲ್ಲಿರುವ ಬ್ಯಾಕ್ಟೀರಿಯಾವನ್ನು ಕಡಿಮೆ ಮಾಡುತ್ತದೆ. ಇದನ್ನೂ ಓದಿ: ಹೊಟ್ಟೆ ಸಮಸ್ಯೆ ನಿವಾರಣೆಗೆ ಇಲ್ಲಿದೆ ಮನೆಮದ್ದು
Advertisement
Advertisement
* ಊಟದ ಬಳಿಕ ಒಂದು ಚಮಚ ಜೀರಿಗೆ ಸೇವನೆ ಮಾಡಿದರೆ ಅದರಿಂದ ಬಾಯಿ ವಾಸನೆ ಕಡಿಮೆಯಾಗುತ್ತದೆ. ಇದನ್ನೂ ಓದಿ:
Advertisement
* ನೀವು ಹೆಚ್ಚಾಗಿ ನೀರು ಸೇವನೆ ಮಾಡಬೇಕು. ಬ್ಯಾಕ್ಟೀರಿಯಾವನ್ನು ಹೊರಹಾಕಿ ನಿಮ್ಮ ದೇಹವನ್ನು ರಿಫ್ರೆಶ್ ಮಾಡುತ್ತದೆ. ಒಂದು ಗ್ಲಾಸ್ ನೀರಿನಲ್ಲಿ ನಿಂಬೆ ಹಣ್ಣಿನ ರಸ, ಸಕ್ಕರೆ, ಉಪ್ಪನ್ನು ಮಿಶ್ರಣ ಮಾಡಿ ಸೇವನೆ ಮಾಡಿ. ಇದನ್ನೂ ಓದಿ: ದೇಹದ ತೂಕ ಮುಜುಗರ ಉಂಟುಮಾಡುತ್ತಿದೆಯಾ? ರಾಮಬಾಣದಂತಿವೆ ಈ ಮನೆಮದ್ದುಗಳು
Advertisement
* ಜೇನುತುಪ್ಪ ಮತ್ತು ದಾಲ್ಚಿನ್ನಿಯ ಮಿಶ್ರಣವು ನಿಮ್ಮ ಬಾಯಿಯ ದುರ್ವಾಸನೆಯನ್ನು ಸಂಪೂರ್ಣವಾಗಿ ಹೋಗಲಾಡಿಸುತ್ತದೆ. ಇದನ್ನೂ ಓದಿ: ದೇಹದ ತೂಕ ಮುಜುಗರ ಉಂಟುಮಾಡುತ್ತಿದೆಯಾ? ರಾಮಬಾಣದಂತಿವೆ ಈ ಮನೆಮದ್ದುಗಳು
* ನೀರಿಗೆ ಒಂದು ಚಮಚ ಮೆಂತೆ ಕಾಳುಗಳನ್ನು ಹಾಕಿ. ಇದನ್ನು ಸೋಸಿಕೊಂಡ ಬಳಿಕ ನೀರನ್ನು ದಿನದಲ್ಲಿ ಒಂದು ಸಲ ಕುಡಿಯಿರಿ. ಇದನ್ನೂ ಓದಿ: ಮಜ್ಜಿಗೆಯಲ್ಲಿದೆ ಮದ್ದಿನ ಗುಣ- ಪ್ರತಿನಿತ್ಯ ಒಂದು ಲೋಟ ಮಜ್ಜಿಗೆ ಕುಡಿದು ನೋಡಿ
* ಒಂದು ಲೋಟ ನೀರಿಗೆ ಸ್ವಲ್ಪ ಅರಿಶಿನ ಹಾಕಿ ಕುಡಿದರೆ ಬಾಯಿ ದುರ್ವಾಸನೆ ಬೀರುವುದಿಲ್ಲ. ಇದನ್ನೂ ಓದಿ: ಗ್ಯಾಸ್ಟ್ರಿಕ್ ಸಮಸ್ಯೆಗೆ ಇಲ್ಲಿದೆ ಮನೆಮದ್ದು
* ಆಗಾಗ್ಗೆ ದಾಲ್ಚಿನ್ನಿ ಸಣ್ಣ ತುಂಡನ್ನು ಬಾಯಿಯಲ್ಲಿ ಜಗಿಯುತ್ತಾ ಇರಿ ಇದನ್ನೂ ಓದಿ: ಒಡೆದ ಹಿಮ್ಮಡಿಯ ಆರೈಕೆಗೆ ಏನು ಮಾಡಬೇಕು ಗೊತ್ತಾ?
* ಬೆಚ್ಚಗಿನ ನೀರಿನಲ್ಲಿ ಉಪ್ಪು ಬೆರಸಿ ಬಾಯಿ ಮುಕ್ಕಳಿಸಿ. ಇದು ಕೆಟ್ಟ ಬ್ಯಾಕ್ಟೀರಿಯಾಗಳ ಬೆಳವಣಿಗೆಯನ್ನು ತಡೆಯುತ್ತದೆ