ಕೂದಲು ಉದುರುವ ಸಮಸ್ಯೆಗೆ ಕರಿಬೇವಿನ ಎಲೆಗಳಲ್ಲಿದೆ ಪರಿಹಾರ

Public TV
2 Min Read
curry leaves

ಕೂದಲು ಉದುರುವಿಕೆಗೆ ಹಲವು ಕಾರಣಗಳಿವೆ. ಆದರೆ ನಾವು ಅಂಗಡಿಯಲ್ಲಿ ಸಿಗುವ ಎಲ್ಲಾ ಶಾಂಪೂ, ಹೇರ್ ಆಯಿಲ್‍ಗಳನ್ನು ಬಳಸಿರುತ್ತೇವೆ. ಆದರೆ ಕೆಲವು ಬಾರಿ ನಾವು ನಮ್ಮ ಮನೆಯಲ್ಲಿ ಇರುವ ಮನೆ ಮದ್ದುಗಳನ್ನು ಬಳಸುವುದರಿಂದ ಈ ಸಮಸ್ಯೆಗಳಿಗೆ ಶಾಶ್ವತವಾದ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ. ಕೂದಲು ಉದುರುವ ಸಮಸ್ಯೆಗೆ ಪರಿಹಾರ ನಿಮ್ಮ ಮನೆಯ ಹಿತ್ತಲಿನಲ್ಲೇ ಇದೆ.

hair fall 1

ಕೂದಲು ಉದುರುವಿಕೆ ತಡೆಯಲು ಹಲವಾರು ಶಾಂಪೂ ಹಾಗೂ ಇತರ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಇದರ ಪ್ರಭಾವ ಮಾತ್ರ ತಾತ್ಕಾಲಿಕ. ಇದನ್ನು ನಾವು ದೀರ್ಘಕಾಲದ ತನಕ ಬಳಸಿದರೆ ಅದರಿಂದ ಬೇರೆ ರೀತಿಯ ಅಡ್ಡಪರಿಣಾಮಗಳು ಬರಬಹುದು. ಹೀಗಾಗಿ ಕೆಲವೊಂದು ಮನೆಮದ್ದುಗಳನ್ನು ಬಳಸಿಕೊಂಡರೆ ತುಂಬಾ ಒಳ್ಳೆಯದು.

curry leaves 1

* ಒಂದು ಕಪ್ ತೆಂಗಿನ ಎಣ್ಣೆಯಲ್ಲಿ ಒಂದು ಹಿಡಿ ಕರಿಬೇವಿನ ಎಲೆಗಳನ್ನು ಕುದಿಸಿ. ನಂತರ ಇದನ್ನು ಫಿಲ್ಟರ್ ಮಾಡಿ, ಕೂದಲಿನ ಬೇರುಗಳಿಗೆ ವಾರಕ್ಕೆ ಎರಡು ಬಾರಿ ಮಸಾಜ್ ಮಾಡಿ. ನಂತರ ನಿಮ್ಮ ತಲೆಯನ್ನು ಶಾಂಪೂ ಬಳಸಿ ತೊಳೆಯಿರಿ. ವಾರಕ್ಕೆ ಎರಡು ಬಾರಿ ಇದನ್ನು ಮಾಡಿ.

curry leaves3

* ಕರಿಬೇವಿನ ಎಲೆಗಳು, ನೆಲ್ಲಿಕಾಯಿ ಮಿಕ್ಸಿಯಲ್ಲಿ ಪುಡಿ ಮಾಡಿ ನಿಮ್ಮ ಕೂದಲಿಗೆ ಹಚ್ಚಿ. ನಂತರ 1 ಗಂಟೆಯ ನಂತರ ತಲೆ ತೊಳೆಯಿರಿ.

hair fall

* ಕರಿಬೇವಿನ ಎಲೆಗಳನ್ನು ನುಣ್ಣಗೆ ರುಬ್ಬಿಕೊಳ್ಳಿ. ಇದನ್ನು ಒಂದು ಕಪ್ ಮೊಸರಿನೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿ. ನಂತರ ಒಂದು ಗಂಟೆ ನೆನೆಸಿ ಮತ್ತು ತೊಳೆಯಿರಿ. ಹೀಗೆ ಮಾಡುವುದರಿಂದ ಕೂದಲು ಉದುರುವುದನ್ನು ತಡೆಯುವುದಲ್ಲದೆ ತಲೆಹೊಟ್ಟು ಕೂಡ ತಡೆಯಬಹುದು.

curry leaves

* ಎರಡು ಚಮಚ ಮೆಂತ್ಯೆ ಕಾಳುಗಳನ್ನು ತೆಗೆದುಕೊಂಡು ಅದನ್ನು ಹುಡಿ ಮಾಡಿಕೊಳ್ಳಿ. 10-15 ಕರಿಬೇವಿನ ಎಲೆಗಳನ್ನು ತೆಗೆದುಕೊಳ್ಳಿ. ಎರಡು ಚಮಚ ನೆಲ್ಲಿಕಾಯಿ ಹುಡಿ ಹಾಕಿ ಮಿಶ್ರಣ ಮಾಡಿ. ಈ ಎಲ್ಲವನ್ನು ಸರಿಯಾಗಿ ಮಿಶ್ರಣ ಮಾಡಿ ಮತ್ತು ಇದನ್ನು ದಪ್ಪಗಿನ ಪೇಸ್ಟ್ ಮಾಡಿಕೊಳ್ಳಿ. ತಲೆಬುರುಡೆ ಮತ್ತು ಕೂದಲಿಗೆ ಪೇಸ್ಟ್ ಬಳಸಿಕೊಳ್ಳಿ. 30 ನಿಮಿಷ ಕಾಲ ಹಾಗೆ ಬಿಡಿ ಮತ್ತು ಇದರ ಬಳಿಕ ಕೂದಲು ತೊಳೆಯಿರಿ.

curry leaves4 1

* ಎರಡು ಕಪ್ ನೀರು ಬಳಸಿಕೊಳ್ಳಿ ಮತ್ತು 10-15 ಕರಿಬೇವಿನ ಎಲೆಗಳನ್ನು ಹಾಕಿ ಕುದಿಸಿ. ಸ್ವಲ್ಪ ಸಮಯ ಇದನ್ನು ಸರಿಯಾಗಿ ಕುದಿಸಿ. ಶಾಂಪೂ ಹಾಕಿಕೊಂಡು ಕೂದಲು ತೊಳೆದ ಬಳಿಕ ಈ ನೀರಿನಿಂದ ಮತ್ತೆ ಕೂದಲು ತೊಳೆಯಿರಿ.

Share This Article
Leave a Comment

Leave a Reply

Your email address will not be published. Required fields are marked *