ಬೆಂಗಳೂರು: ಶುಕ್ರವಾರ ತಡರಾತ್ರಿ ಸುರಿದ ಮಳೆಗೆ ಮನೆಯ ಗೋಡೆ ಕುಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ನಗರದ ಹೊರವಲಯದ ಹೂಡಿ ವಾರ್ಡ್ ಸಾದರಮಂಗಲದಲ್ಲಿ ನಡೆದಿದೆ.
36 ವರ್ಷದ ರಾಜು ಮೃತಪಟ್ಟ ವ್ಯಕ್ತಿ. ರಾಜು ತಾಯಿ ಚಿನ್ನಮ್ಮ (60) ಮತ್ತು ಮಂಜುನಾಥ್ (30) ಇಬ್ಬರಿಗೂ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶುಕ್ರವಾರ ರಾತ್ರಿ ಮಳೆಯಾಗಿದ್ದು, ಮೂರು ಗಂಟೆ ಸುಮಾರಿಗೆ ಮನೆಯ ಗೋಡೆ ಕುಸಿದಿದೆ.
Advertisement
ಈ ವೇಳೆ ಮನೆಯಲ್ಲಿ ಎಲ್ಲರೂ ನಿದ್ದೆಯಲ್ಲಿದ್ದರು. ಮೃತ ರಾಜು ಗಾರೆ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಪಾಲಿಕೆ ಅಧಿಕಾರಿಗಳು ಹಾಗೂ ಪಾಲಿಕೆ ಎ.ಸಿ. ಹರಿಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.