ವಿಜಯಪುರ: ಸತತವಾಗಿ ಸುರಿದ ಭಾರೀ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ತಾಯಿ-ಮಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಭೈರವಾಡಗಿ ಗ್ರಾಮದಲ್ಲಿ ನಡೆದಿದೆ.
60 ವರ್ಷದ ಶಂಕ್ರಮ್ಮ ರಾಮಚಂದ್ರಪ್ಪ ಔರಾದಿ ಹಾಗೂ ಮಗಳು 21 ವರ್ಷದ ಮಹಾದೇವಿ ಔರಾದಿ ಮೃತ ದುರ್ದೈವಿಗಳು. ಮನೆಯಾಚೆ ಮಲಗಿದ್ದ ಶಿವಪುತ್ರ ಅಪಾಯದಿಂದ ಪಾರಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಗೋಡೆಗಳು ನೆನೆದಿದ್ದ ಪರಿಣಾಮ ಇಂದು ನಸುಕಿನ ಜಾವ ಈ ಅವಘಡ ಸಂಭವಿಸಿದೆ. ಮನೆಯಲ್ಲಿ ಮಲಗಿದ್ದ ಶಂಕ್ರಮ್ಮ ಮತ್ತು ಮಗಳು ಮಹಾದೇವಿಯ ಮೇಲೆ ಗೋಡೆಗಳು ಕುಸಿದಿವೆ. ಪರಿಣಾಮ ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಈ ಘಟನೆ ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.