ನೋಯ್ಡಾ: ತುರ್ತು ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಟ್ರಾಫಿಕ್ ಜಾಮ್‍ನಲ್ಲಿ ಸಿಲುಕಿ 7 ವರ್ಷದ ಬಾಲಕ ಮೃತಪಟ್ಟ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.
ಮೃತ ದುರ್ದೈವಿ ಬಾಲಕನನ್ನು ಲವ್ಕಶ್ ಎಂದು ಗುರುತಿಸಲಾಗಿದೆ.
Advertisement
Advertisement
ಉತ್ತರಪ್ರದೇಶದ ಫಿರೋಜಾಬಾದ್ ನಿವಾಸಿಯಾಗಿರೋ ಈ ಬಾಲಕ ಜ್ವರದಿಂದ ತೀವ್ರವಾಗಿ ಬಳಲುತ್ತಿದ್ದ. ಈ ಹಿನ್ನೆಲೆಯಲ್ಲಿ ಈತನನ್ನು ಏಮ್ಸ್ ಆಸ್ಪತ್ರೆಗೆ ಹೆಚಿನ ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ನಲ್ಲಿ ಕರೆದೊಯ್ಯಲಾಗಿತ್ತು. ಈ ವೇಳೆ ಫಿರೋಜಾಬಾದ್‍ನ ರಸ್ತೆಯಲ್ಲಿ ಬಿಲ್ಡರ್‍ಗಳ ವಿರುದ್ಧ ಪ್ರತಿಭಟನೆ ನಡೆಯುತ್ತಿತ್ತು. ಈ ಪ್ರತಿಭಟನೆಯಿಂದಾಗಿ ಮಾರ್ಗ ಮಧ್ಯೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು. ಪರಿಣಾಮ ಆಂಬ್ಯುಲೆನ್ಸ್ ಮುಂದೆ ಚಲಿಸಲಾಗದೆ ಬಾಲಕ ವಾಹನದಲ್ಲೇ ಮೃತಪಟ್ಟಿದ್ದಾನೆ.
Advertisement
ಬಾಲಕ ಶನಿವಾರ ಸಂಜೆ 4ರ ಸುಮಾರಿಗೆ ಬಾಲಕ ಆಂಬ್ಯುಲೆನ್ಸ್ ನಲ್ಲೇ ಮೃತಪಟ್ಟಿರುವುದಾಗಿ ಚಾಲಕನ ಸಹೋದರ ತಿಳಿಸಿದ್ದಾರೆ. ಆದ್ರೆ ಗೃಹಬಳಕೆದಾರರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದರು. ಆದ್ರೆ ಅವರಿಗೆ ಬಾಲಕನ ಬಗ್ಗೆ ಮಾಹಿತಿ ಬಂದಿಲ್ಲವೆಂದು ಹೋರಾಟಗಾರರು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Advertisement
ಸುಮಾರು 200 ಮಂದಿ ಗೃಹಬಳಕೆದಾರರು ತಮ್ಮ ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನಾ ಸ್ಥಳದಲ್ಲಿ ಪೊಲೀಸರು ಇದ್ದರೂ ಯಾರೊಬ್ಬರು ಬಾಲಕನ ಸಹಾಯಕ್ಕೆ ಬಂದಿಲ್ಲ ಅಂತಾ ಪ್ರತ್ಯಕ್ಷದರ್ಶಿಯೊಬ್ಬರು ಆರೋಪಿಸಿದ್ದಾರೆ.
ಈ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ. ಮಾಧ್ಯಮಗಳ ಮೂಲಕ ಬಾಲಕ ಸಾವನಪ್ಪಿರುವ ಬಗ್ಗೆ ತಿಳಿದುಬಂದಿದೆ. 250 ಮಂದಿ ಪ್ರತಿಭಟನಾಕಾರರ ವಿರುದ್ಧ ಐಪಿಸಿ ಸೆಕ್ಷನ್ 147 ಹಾಗೂ 341ರ ಅಡಿಯಲ್ಲಿ ಕೇಸ್ ದಾಖಲಿಸಿಕೊಳ್ಳಲಾಗಿದೆ ಅಂತಾ ಎಸ್ಪಿ ಲವ ಕುಮಾರ್ ಹೇಳಿದ್ದಾರೆ.