ದಿನೇ ದಿನೇ ಬಿಸಿಲಿನ ತಾಪ ಅಧಿಕವಾಗುತ್ತಿದೆ. ಇದರ ಜೊತೆಗೆ ಕೊರೊನಾ ಸೋಂಕಿತರ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಇವರೆಡರ ಮಧ್ಯೆ ನಮ್ಮ ಆರೋಗ್ಯದ ಕಡೆ ಗಮನ ಕೊಡುವುದು ಪ್ರಮುಖವಾಗಿರುತ್ತದೆ. ದೇಹಕ್ಕೆ ತಂಪನ್ನೂ ನೀಡುವುದರ ಜೊತೆಗೆ ರೋಗನಿರೋಧಕ ಶಕ್ತಿಯನ್ನೂ ಹೆಚ್ಚಿಸುವ ಜ್ಯೂಸ್‍ಗಳಿವೆ. ಕೆಳಕಂಡಂತೆ ತಿಳಿಸಿರುವ ಜ್ಯೂಸ್‍ಗಳನ್ನು ನೀವು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದು.
ನಿಂಬು ಶರಬತ್: ನಿಂಬೆ ಹಣ್ಣಿನಲ್ಲಿ ವಿಟಮಿನ್ ಸಿ ಅಧಿಕವಾಗಿರುತ್ತದೆ. ಬೆಚ್ಚಗಿನ ನೀರಿನಲ್ಲಿ ನಿಂಬೆ ರಸವನ್ನು ಸೇರಿಸಿ ಕುಡಿಯುವುದರಿಂದ ದೇಹದ ಆರೋಗ್ಯವು ಸುಧಾರಿಸುತ್ತದೆ. ಇದರಿಂದಾಗಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯವಾಗುತ್ತದೆ.
Advertisement
Advertisement
ಬೇಲದ ಹಣ್ಣು: ಬೇಲದ ಹಣ್ಣು ಬೇಸಿಗೆ ಕಾಲಕ್ಕೆ ಸರಿಯಾದ ಆಹಾರವಾಗಿದೆ. ಅದರಲ್ಲೂ ಬಿಸಿಲಿನ ತಾಪ ಹೆಚ್ಚಿದಾಗ ಈ ಶರಬತ್‍ನ್ನು ಮಾಡಿ ಕುಡಿಯುವುದು ದೇಹಕ್ಕೂ ಒಳ್ಳೆಯದು. ಇದರಲ್ಲಿ ಫೈಬರ್ ವಿಟಮಿನ್ ಸಿ ಹಾಗೂ ರೋಗನಿರೋಧಕ ಶಕ್ತಿ ಹೆಚ್ಚಿಸಲು ಅನೇಕ ಪೋಷಕಾಂಶಗಳು ಹೇರಳವಾಗಿರುತ್ತವೆ. ಇದರಿಂದಾಗಿ ಮೊಡವೆ, ಚರ್ಮದಲ್ಲಿ ಸುಕ್ಕಾಗುವುದು ಹಾಗೂ ಬಿಳಿ ಕೂದಲಿನಂತಹ ಸಮಸ್ಯೆಯನ್ನು ನಿಭಾಯಿಸಲು ಸಹಾಯ ಮಾಡುತ್ತದೆ. ಇದನ್ನೂ ಓದಿ: ಮಾವಿನ ಹಣ್ಣು ಎಂದರೆ ಇಷ್ಟಾನಾ- ಅದರ ಪ್ರಯೋಜನಗಳ ಬಗ್ಗೆ ತಿಳಿದಿದ್ಯಾ?
Advertisement
Advertisement
ಸೋರೆಕಾಯಿ ಜ್ಯೂಸ್: ಬೇಸಿಗೆಯಲ್ಲಿ ನಮ್ಮ ದೇಹಕ್ಕೆ ಪ್ರಮುಖವಾಗಿ ಪೋಷಕಾಂಶಗಳ ಅಗತ್ಯವಿರುತ್ತದೆ. ಇದರಿಂದಾಗಿ ಹಸಿರು ತರಕಾರಿಗಳನ್ನು ಸೇವಿಸಬೇಕು. ಸೋರೆಕಾಯಿ, ಪುದಿನಾ ಎಲೆಗಳಿಂದ ತಯಾರಿಸಿದ ಜ್ಯೂಸ್‍ನ್ನು ಕುಡಿಯುವುದರಿಂದ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ತೂಕವನ್ನು ಕಡಿಮೆ ಮಾಡಿಕೊಳ್ಳುವುದರ ಜೊತೆಗೆ ನಿಮ್ಮ ಚರ್ಮ ಹೊಳೆಯುವಂತೆ ಮಾಡುತ್ತದೆ. ಇದನ್ನೂ ಓದಿ: ಬೇಸಿಗೆಯಲ್ಲಿ ಕರುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಿ
ನೆಲ್ಲಿಕಾಯಿ ಜ್ಯೂಸ್: ಇದು ಸಾಂಪ್ರದಾಯಿಕ ರೋಗ ನಿರೋಧಕ ಜ್ಯೂಸ್ ಆಗಿದೆ. ಇದರಲ್ಲಿ ವಿಟಾಮಿನ್ ಸಿ ಹೇರಳವಾಗಿರುತ್ತದೆ. ಜೊತೆಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಶಕ್ತಿ ಸಾಕಷ್ಟು ಪ್ರಮಾಣದಲ್ಲಿರುತ್ತದೆ. ಇದರಿಂದಾಗಿ ಉತ್ತಮ ಆರೋಗ್ಯಕ್ಕೆ ಸಹಾಯ ಮಾಡುತ್ತದೆ. ಇದನ್ನೂ ಓದಿ: ಔಷಧಿ ಗುಣಗಳಿರುವ ಏಲಕ್ಕಿ ಸೇವನೆಯಿಂದ ಸಿಗುತ್ತೆ ಈ ಪ್ರಯೋಜನ!
ಮಜ್ಜಿಗೆ: ಮಜ್ಜಿಗೆಯನ್ನು ಸೇವಿಸುವುದರಿಂದ ಕರುಳಿನ ಆರೋಗ್ಯ ಹೆಚ್ಚುತ್ತದೆ. ಜೊತೆಗೆ ಜೀರ್ಣಕ್ರಿಯೆಗೂ ಸಹಾಯ ಮಾಡುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಮಜ್ಜಿಗೆಗೆ ಪುದೀನ ಎಲೆ ಸೇರಿಸಿ ಕುಡಿಯುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಇದನ್ನೂ ಓದಿ: ಬೇಸಿಗೆಯಲ್ಲಿ ನಿಮ್ಮ ಆರೋಗ್ಯವನ್ನು ಈ ರೀತಿ ಕಾಪಾಡಿಕೊಳ್ಳಿ