ಶಿವಮೊಗ್ಗ: ಗೌರಿಗದ್ದೆಯ ವಿನಯ್ ಗುರೂಜಿ (Vinay Guruji) ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ (Social Media) ಅಪಪ್ರಚಾರ ಮಾಡುತ್ತಿದ್ದು, ಇದರ ವಿರುದ್ಧ ನ.14 ರಂದು ಪ್ರತಿಭಟನಾ (Protest) ಮೆರವಣಿಗೆ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ವಿನಯ್ ಗುರೂಜಿ ಭಕ್ತವೃಂದ ತಿಳಿಸಿದೆ.
Advertisement
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಘವೇಂದ್ರ ಹೆಬ್ಬಾರ್ ಮತ್ತು ಶಂಕರ್, ವಿನಯ್ ಗುರೂಜಿಯವರು (Vinay Guruji) ಈ ನಾಡಿನ ಧಾರ್ಮಿಕ ನಾಯಕರು. ಈ ದೇಶದ ಸಂಸ್ಕೃತಿಯ ಎತ್ತಿ ಹಿಡಿಯುವ ಕೆಲಸ ಮಾಡುತ್ತಿದ್ದಾರೆ. ದೇಶ-ವಿದೇಶಗಳಲ್ಲೂ ಅವರಿಗೆ ಭಕ್ತರಿದ್ದಾರೆ. ಇಂತಹ ವ್ಯಕ್ತಿಯ ಬಗ್ಗೆ ಇತ್ತೀಚೆಗೆ ಅಪಪ್ರಚಾರ ನಡೆಯುತ್ತಿದೆ. ಅವರ ವಿರುದ್ಧ ಷಡ್ಯಂತ್ರ ರೂಪಿಸಲಾಗುತ್ತಿದೆ. ಇದು ಅವರ ಭಕ್ತವೃಂದಕ್ಕೆ ತುಂಬಾ ನೋವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕರೆಂಟ್ ತಗುಲಿ ಕಾಮಗಾರಿ ಮಾಡುತ್ತಿದ್ದ ಇಬ್ಬರು ಕಾರ್ಮಿಕರ ಬಲಿ – ಹೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ
Advertisement
Advertisement
ಸಾಮಾಜಿಕ ಜಾಲತಾಣಗಳಲ್ಲಿ ಗುರೂಜಿಯವರ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಆಪಾದನೆ ಮಾಡುವವರು ದಾಖಲೆಗಳಿದ್ದರೆ ನ್ಯಾಯಾಲಯದ ಮೊರೆ ಹೋಗಲಿ. ಸರ್ಕಾರ ಸಹ ಈ ಬಗ್ಗೆ ತನಿಖೆ ನಡೆಸಿ, ಕಾಣದ ಕೈಗಳನ್ನು ಮಟ್ಟಹಾಕಲಿ. ಸುಖಾಸುಮ್ಮನೇ ಆರೋಪ ಮಾಡುವುದು ಶೋಭೆ ತರುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಅಪ್ರಾಪ್ತ ಬಾಲಕಿ ರೇಪ್‌ಕೇಸ್ – ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 1 ಲಕ್ಷ ಬಹುಮಾನ
Advertisement
ಆಶ್ರಮದ ಬಗ್ಗೆ ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುವುದು ಹವ್ಯಾಸವಾಗಿಬಿಟ್ಟಿದೆ. ಗುರೂಜಿಯವರನ್ನು ಅಪರಾಧಿ ಎಂದು ಬಿಂಬಿಸಿ ಭಕ್ತರಲ್ಲಿ ತಪ್ಪು ಅಭಿಪ್ರಾಯ ಮೂಡಿಸಲಾಗುತ್ತಿದೆ. ಗುರೂಜಿಯವರ ಬೆಂಬಲಕ್ಕೆ ಭಕ್ತರಿದ್ದಾರೆ. ವಿನಯ್ ಗುರೂಜಿ ಭಕ್ತರಲ್ಲಿ ಆತ್ಮಸ್ಥೈರ್ಯ ತುಂಬಲು ನ.14ರ ಬೆಳಗ್ಗೆ 10:30ಕ್ಕೆ ಶಿವಪ್ಪನಾಯಕ ಪ್ರತಿಮೆ ಮುಂಭಾಗದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ (Protest) ನಡೆಸಲಾಗುವುದು ಎಂದು ಹೇಳಿದ್ದಾರೆ.