ಹಾವೇರಿ: ಹಾನಗಲ್ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ತಮ್ಮದೆಯಾದ ಕಸರತ್ತು ನಡೆಸಿದ್ದಾರೆ. ಬಿಜೆಪಿ ಪಕ್ಷದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
Advertisement
ಸಂಸದ ಶಿವಕುಮಾರ್ ಉದಾಸಿಯವರು ತಮ್ಮ ಪತ್ನಿ ರೇವತಿ ಉದಾಸಿಯವರಿಗೆ ಟಿಕೆಟ್ ಕೊಡಿಸಲು ಇನ್ನಿಲ್ಲದ ಪ್ರಯತ್ನ ನಡೆಸಿದ್ದು, ಬೆಂಗಳೂರಿನಲ್ಲೇ ಬೀಡು ಬಿಟ್ಟಿದ್ದಾರೆ. ಈ ಮೂಲಕ ತೆರೆಮರೆಯ ಕಸರತ್ತು ನಡೆಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯನವರಿಗೆ ಕೋವಿಡ್ ಬಂದ ಮೇಲೆ ಏನೇನೋ ಮಾತಾಡ್ತಿದ್ದಾರೆ: ಸೋಮಶೇಖರ್
Advertisement
ಸಂಸದ ಶಿವಕುಮಾರ ಉದಾಸಿ ಪತ್ನಿ ರೇವತಿ ಉದಾಸಿ, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಕೃಷ್ಣ ಈಳಗೇರ, ಮಾಜಿ ಶಾಸಕ ಶಿವರಾಜ ಸಜ್ಜನ ಸೇರಿದಂತೆ ಹಲವು ಆಕಾಂಕ್ಷಿಗಳು ತಮ್ಮದೆ ಪಯತ್ನ ನಡೆಸಿದ್ದಾರೆ. ಇವತ್ತು ಆಕಾಂಕ್ಷಿಗಳ ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಸಭೆ ನಡೆಸಲಿದ್ದಾರೆ.
Advertisement
Advertisement
ಸಂಜೆ ಐದು ಗಂಟೆಗೆ ಹಾನಗಲ್ ಪಟ್ಟಣದ ಉದಾಸಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಸಭೆಯಲ್ಲಿ ಆಕಾಂಕ್ಷಿಗಳ ಜೊತೆ ಮಾತುಕತೆ ಮತ್ತು ಆಕಾಂಕ್ಷಿಗಳಿಂದ ಮನವಿ ಸ್ವೀಕರಿಸಲಿದ್ದಾರೆ. ಜಿಲ್ಲಾ ಮತ್ತು ರಾಜ್ಯ ಮಟ್ಟದ ಕೋರ್ ಕಮಿಟಿ ಸಭೆ ನಂತರ ರಾಜ್ಯ ಘಟಕದಿಂದ ಅಭ್ಯರ್ಥಿ ಹೆಸರು ಅಂತಿಮಯಾಗಲಿದೆ. ಅದರೆ ಉಪಚುನಾವಣೆ ಘೋಷಣೆ ನಂತರ ಶಿವಕುಮಾರ ಉದಾಸಿ ಬೆಂಗಳೂರಿನಲ್ಲೇ ಬೀಡುಬಿಟ್ಟು ಪತ್ನಿ ರೇವತಿ ಉದಾಸಿಗೆ ಟಿಕೆಟ್ ಗಿಟ್ಟಿಸಿಕೊಳ್ಳಲು ತೆರೆಮರೆಯ ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ.